ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಿಂದ ಅಮಾನತುಗೊಂಡಿದ್ದ ದಲಿತ ಪಿ.ಎಚ್ಡಿ ವಿದ್ಯಾರ್ಥಿ ಭಾನುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾರ್ಥಿಗಳು ಕೇಂದ್ರ ಸಚಿವ ಬಂಡಾರು ದತ್ತಾತ್ರೇಯ ವಿರುದ್ಧ ದೂರು ದಾಖಲಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ರೋಹಿತ್ ಆತ್ಮಹತ್ಯೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮೇಲಿನ ದೌರ್ಜನ್ಯ (ಎಸ್ಸಿ/ಎಸ್ಟಿ ಅಟ್ರಾಸಿಟಿ) ಕಾಯ್ದೆ ಪ್ರಕಾರ ಕೇಂದ್ರ ಸಚಿವ ಭಂಡಾರು ದತ್ತಾತ್ರೇಯ ವಿರುದ್ಧ ದೂರು ದಾಖಲಿಸುವಂತೆ ಒತ್ತಾಯಿಸುತ್ತಿದ್ದಾರೆ. ಭಂಡಾರು ದತ್ತಾತ್ರೇಯ ಐವರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸುವಂತೆ ಕೋರಿ ಕೇಂದ್ರ ಮಾನವ ಸಂಪನ್ಮೂಲ ಇಲಾಖೆಗೆ ಪತ್ರ ಬರೆದಿದ್ದರು.
ವಿಶ್ವವಿದ್ಯಾಲಯದ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಸಿವಿ ಆನಂದ್ ತಿಳಿಸಿದ್ದಾರೆ.