ಪಣಜಿ: ಐಸಿಸ್ ಸಂಘಟನೆಯ ಮುದ್ರೆ ಹೊಂದಿರುವ ಅನಾಮಿಕ ಪತ್ರವೊಂದು ಗೋವಾ ಪೊಲೀಸರ ಕೈಗೆ ಸಿಕ್ಕಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹತ್ಯೆ ನಡೆಸುವುದಾಗಿ ಬರೆಯಲಾಗಿದೆ.
ಈ ಪತ್ರದ ಪ್ರತಿಯನ್ನು ಗೋವಾ ಪೊಲೀಸರು ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ ರವಾನಿಸಿದ್ದು, ಪ್ರಕರಣವನ್ನು ಭಯೋತ್ಪಾದನೆ ನಿಗ್ರಹ ದಳಕ್ಕೆ ವರ್ಗಾಯಿಸಿದ್ದಾರೆ. ಪೊಲೀಸರು ಪ್ರಕರಣದ ಕುರಿತು ಚುರುಕು ತನಿಖೆ ಕೈಗೊಂಡಿದ್ದು, ಆದಷ್ಟು ಬೇಗ ಪ್ರಕರಣವನ್ನು ಭೇದಿಸುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.