ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಗಿ ಅಮಿತ್ ಶಾ ಅವರು ರವಿವಾರ ಪುನರಾಯ್ಕೆಯಾಗಿದ್ದಾರೆ. ಶಾ ಅವರ ಹಾಲಿ ಅವಧಿ ಶನಿವಾರಕ್ಕೆ ಮುಕ್ತಾಯಗೊಂಡಿದ್ದು, ರವಿವಾರ ಅವರು ಮತ್ತೆ 3 ವರ್ಷಗಳ ಅವಧಿಗೆ ಪುನರಾಯ್ಕೆಯಾಗಿದ್ದಾರೆ.
ಈ ಹಿಂದೆ ಪಕ್ಷದ ಅಧ್ಯಕ್ಷರಾಗಿದ್ದ ರಾಜ್‌ನಾಥ್‌ಸಿಂಗ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಅಮಿತ್ ಶಾ ಅವರು ಪಕ್ಷದ ಅಧ್ಯಕ್ಷ ಗಾದಿಯನ್ನು ವಹಿಸಿಕೊಂಡಿದ್ದರು. ಪಕ್ಷದ ಅಧ್ಯಕ್ಷ ಹುದ್ದೆಗೆ ಅಮಿತ್ ಶಾ ಅವರು ನಾಮಪತ್ರ ಸಲ್ಲಿಸಲಿದ್ದು, ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಅಮಿತ್ ಶಾ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಹಾರಾಷ್ಟ್ರ, ಹರ್ಯಾಣ, ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷ ಅಧಿಕಾರದ ಗದ್ದುಗೆ ಏರಿತ್ತು. ಆದರೆ ದಿಲ್ಲಿ ಮತ್ತು ಬಿಹಾರದಲ್ಲಿ ಪಕ್ಷ ಸೋಲು ಕಂಡಿತ್ತು. ಮತ್ತೂಂದೆಡೆ ಹೆಚ್ಚಿನ ಅಸ್ತಿತ್ವ ಇಲ್ಲದ ಕೇರಳ, ಅಸ್ಸಾಂ, ಪಶ್ಚಿಮ ಬಂಗಾಲದಲ್ಲಿ ನೆಲೆಯೂರುವಲ್ಲಿ ಪಕ್ಷ ಯಶಸ್ವಿಯಾಗಿತ್ತು.
-ಉದಯವಾಣಿ