ಚೆನ್ನೈ: ತಮಿಳುನಾಡಿನ ವಿಲ್ಲುಪುರಂನ ಖಾಸಗಿ ಮೆಡಿಕಲ್ ಕಾಲೇಜಿನ ಮೂವರು ವಿದ್ಯಾರ್ಥಿನಿಯರು ಕಾಲೇಜು ಆಡಳಿತ ಮಂಡಳಿಯ ಕಿರುಕುಳದಿಂದ ಬೇಸತ್ತು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿದ್ಯಾರ್ಥಿನಿಯರು ಈ ಸಂಬಂಧ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಪೊಲೀಸರ ತನಿಖೆಯಿಂದ ಇನ್ನಷ್ಟು ಮಾಹಿತಿ ಸಿಗಬೇಕಿದೆ.
ಇತ್ತೀಚೆಗೆ ಹೈದರಾಬಾದ್ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣ ಸಂಬಂಧ ದೇಶಾದ್ಯಂತ ತೀವ್ರ ಪ್ರತಿಭಟನೆಗಳು ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ಆಡಳಿತ ಮಂಡಳಿ ಕ್ರಮಗಳಿಗೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.