ನವದೆಹಲಿ, ಜ.25- ಗಡಿರಾಜ್ಯ ಅರುಣಾಚಲ ಪ್ರದೇಶದಲ್ಲಿ ಅಧ್ಯಕ್ಷೀಯ ಆಡಳಿತ ಹೇರಬೇಕೆಂಬ ಪ್ರಸ್ತಾವನೆಗೆ ಕಾರಣಗಳೇನು ಎಂಬುದನ್ನು ವಿವರಿಸಿ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕೇಂದ್ರ ಸರ್ಕಾರವನ್ನು ಕೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಇಂದು ಮಧ್ಯಾಹ್ನ ರಾಷ್ಟ್ರಪತಿ ಭವನಕ್ಕೆ ತೆರಳಿ ವಿಸ್ತೃತ ವರದಿ ನೀಡಿದರು.
ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಜಾರಿ ಮಾಡುವಂತೆ ಕೇಂದ್ರ ಸರ್ಕಾರ ಪ್ರಣಬ್ ಅವ ರಿಗೆ ಶಿಫಾರಸು ಮಾಡಿತ್ತು. ಅರುಣಾಚಲ ಪ್ರದೇಶ ರಾಜ್ಯದ ಬಿಕ್ಕಟ್ಟಿಗೆ ಸಂಬಂಧಿಸಿದ ವಿವಾದ ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ನ್ಯಾಯಾಧೀಶರರು ವಾದ-ಪ್ರತಿವಾದಗಳನ್ನು ಆಲಿಸುತ್ತಿದ್ದಾರೆ. ಈ ಮಧ್ಯೆಯೇ ಕೇಂದ್ರ ಈ ಶಿಫಾರಸುಮಾಡಿದೆ.
ಕೇಂದ್ರದ ಈ ನಡೆಯ ವಿರುದ್ಧ ಕಾಂಗ್ರೆಸ್ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದೆ. ಈಶಾನ್ಯಗಡಿ ರಾಜ್ಯದಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಅಸ್ಥಿರತೆ ಉಂಟುಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.