ಪಠಾಣ್ಕೋಟ್: ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ದೇಶಾದ್ಯಂತ ಸಾಕಷ್ಟು ಭದ್ರತೆ ಒದಗಿಸಲಾಗಿದೆಯಾದರೂ ಬಾಂಬ್ ಇದೆಯೆನ್ನಲಾದ ಬ್ಯಾಗ್ ಇಲ್ಲಿನ ವಾಯುನೆಲೆಗೆ ಸಮೀಪದಲ್ಲಿರುವ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾಗಿದೆ. ಇದರಿಂದ ಸಾರ್ವಜನಿಕರು ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ ಪ್ರಸಂಗ ಮಂಗಳವಾರ ನಡೆದಿದೆ.
ಬಾಂಬ್ ಪತ್ತೆಯಾಗಿರುವ ಸ್ಥಳಕ್ಕೆ ಕ್ಷಣಾರ್ಧದಲ್ಲಿ ದೌಡಾಯಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಬಾಂಬ್ ನಿಷ್ಕ್ರಿಯಗೊಳಿಸಿದ್ದಾರೆನ್ನಲಾಗಿದೆ. ಅಲ್ಲದೇ ಬೇರೆಲ್ಲಾದರೂ ಇರಿಸಿರಬಹುದಾದ ಶಂಕೆ ಮೂಡಿದ ಹಿನ್ನೆಲೆಯಲ್ಲಿ ರೈಲ್ವೆ ನಿಲ್ದಾಣದ ಸುತ್ತಮುತ್ತ ಸಾಕಷ್ಟು ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಬಾಂಬ್ ನಿಷ್ಕ್ರಿಯ ದಳ ಶೋಧ ಕಾರ್ಯಾಚರಣೆ ನಡೆಸುತ್ತಿದೆ.