ರಾಷ್ಟ್ರೀಯ

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ

Pinterest LinkedIn Tumblr

Pranavನವದೆಹಲಿ (ಪಿಟಿಐ): ತೀವ್ರ ರಾಜಕೀಯ ಪಲ್ಲಟಗಳಿಂದ ಸಾಂವಿಧಾನಿಕ ಬಿಕ್ಕಟ್ಟು ಎದುರಿಸುತ್ತಿದ್ದ ಈಶಾನ್ಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಮಂಗಳವಾರದಿಂದ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಿದೆ.

ರಾಜಕೀಯ ಅಸ್ಥಿರತೆಯ ಕಾರಣಕ್ಕಾಗಿ ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಹೇರಲು ಕೇಂದ್ರ ಸಚಿವ ಸಂಪುಟವು ಭಾನುವಾರ ಸಭೆ ನಡೆಸಿ ನಿರ್ಧಾರ ಕೈಗೊಂಡಿತ್ತು.

ಕೇಂದ್ರ ಸಂಪುಟದ ಪ್ರಸ್ತಾವಕ್ಕೆ ರಾಷ್ಟ್ರಪತಿ ಮುಖರ್ಜಿ ಅವರು ಅಂಕಿತ ಹಾಕಿದ್ದಾರೆ ಎಂದು ಮೂಲಗಳು ಹೇಳಿವೆ.

ಅರುಣಾಚಲ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಶಿಫಾರಸು ನಿರ್ಧಾರ ಕೈಗೊಳ್ಳುವುದು ಅನಿವಾರ್ಯವಾಗಿತ್ತು ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್‌ ರಿಜಿಜು ಅವರು ಹೇಳಿದ್ದರು.

ರಾಷ್ಟ್ರಪತಿ ಆಳ್ವಿಕೆ ವಿಧಿಸುವ ಕೇಂದ್ರದ ಶಿಫಾರಸನ್ನು ತಿರಸ್ಕರಿಸುವಂತೆ ರಾಷ್ಟ್ರಪತಿ ಮುಖರ್ಜಿ ಅವರಲ್ಲಿ ಕಾಂಗ್ರೆಸ್‌ ನಿಯೋಗವು ಸೋಮವಾರವಷ್ಟೇ ಮನವಿ ಮಾಡಿತ್ತು. ಅಲ್ಲದೇ, ಈ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿಯು ಬುಧವಾರ (ಜನವರಿ 27) ವಿಚಾರಣೆಗೆ ಬರಲಿದೆ.

ಮತ್ತೊಂದಡೆ, ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸಿಗೆ ಕಾರಣವಾದ ಅಂಶಗಳ ಕುರಿತು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ಮುಖರ್ಜಿ ಅವರನ್ನು ಸೋಮವಾರ ಸಂಜೆಯಷ್ಟೇ ಭೇಟಿ ಮಾಡಿ ಮನವರಿಕೆ ಮಾಡಿಕೊಟ್ಟಿದ್ದರು.

Write A Comment