ರಾಷ್ಟ್ರೀಯ

ದಲಿತ ವಿದ್ಯಾರ್ಥಿ ಆತ್ಮಹತ್ಯೆ: ದೆಹಲಿಯಲ್ಲಿ ಮತ್ತೆ ಪ್ರತಿಭಟನೆ, 60 ವಿದ್ಯಾರ್ಥಿಗಳ ಬಂಧನ

Pinterest LinkedIn Tumblr

rohit-21ನವದೆಹಲಿ: ಆತ್ಮಹತ್ಯೆಗೆ ಶರಣಾದ ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದ ದಲಿತ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಒತ್ತಾಯಿಸಿ ದೆಹಲಿ ವಿವಿಗಳ ಸಾವಿರಾರು ವಿದ್ಯಾರ್ಥಿಗಳು ಮತ್ತೆ ಪ್ರತಿಭಟನೆ ಆರಂಭಿಸಿದ್ದು, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದತ್ತ ಮೆರವಣಿಗೆ ಹೊರಟಿದ್ದ 60 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರ ಪ್ರಕಾರ, ಭದ್ರತೆಯ ದೃಷ್ಟಿಯಿಂದ ಶಾಸ್ತ್ರಿ ಭವನದ ಹೊರಗಡೆ ಸುಮಾರು 60 ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದು, ಅವರನ್ನು ಸಂಸತ್ ರಸ್ತೆಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ಪ್ರತಿ ಬಾರಿಯೂ ನಾವು ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ನಮ್ಮ ಬೇಡಿಕೆಗಳನ್ನು ಸಲ್ಲಿಸಲು ಯತ್ನಿಸುತ್ತೇವೆ. ಆದರೆ ಪೊಲೀಸರು ನಮ್ಮನ್ನು ಬಂಧಿಸುತ್ತಿದ್ದಾರೆ. ಪ್ರತಿಭಟನೆ ಮಾಡುವುದು ನಮ್ಮ ಹಕ್ಕು. ಸಾಂಸ್ಥಿಕ ಹತ್ಯೆಯನ್ನು ಮುಚ್ಚಿ ಹಾಕಲು ಯತ್ನಿಸುತ್ತಿರುವ ಸರ್ಕಾರ ನಮ್ಮನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಜಎನ್‌ಯು ವಿದ್ಯಾರ್ಥಿ ಒಕ್ಕೂಟದ ಉಪಾಧ್ಯಕ್ಷ ಶೆಹ್ಲಾ ರಷಿದ್ ಶೋರಾ ಅವರು ಹೇಳಿದ್ದಾರೆ.

ಕ್ರಾಂತಿಕಾರಿ ಯುವ ಸಂಘಟನೆ(ಕೆವೈಎಸ್) ಮತ್ತು ಅಖಿಲ ಭಾರತ ವಿದ್ಯಾರ್ಥಿ ಸಂಘಟನೆ(ಎಐಎಸ್‌ಎ)ಯ ಕಾರ್ಯಕರ್ತರು ಸಹ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

Write A Comment