ಜಮ್‌ಷೆಡ್‌ಪುರ: ಎಂಜಿಎಂ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 15 ವರ್ಷದ ಅತ್ಯಾಚಾರ ಸಂತ್ರಸ್ಥೆಯ ಮೇಲೆ ಮತ್ತೆ ಅತ್ಯಾಚಾರ ನಡೆಸಿರುವ ದಾರುಣ ಘಟನೆ ಭಾನುವಾರ ರಾತ್ರಿ ನಡೆದಿದೆ.
ಎರಡು ದಿನಗಳ ಹಿಂದೆ ನಗರದ ಹೊರವಲಯದ ಪರ್ಸುದ್ದಿಯಲ್ಲಿ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿಯನ್ನು ಎಂಜಿಎಂ ಆಸ್ಪತ್ರೆಗೆ ದಾಖಲಿಸಿದ್ದ ಪೊಲೀಸರು, ಆರೋಪಿ ಅಪ್ರಾಪ್ತ ಬಾಲಕನನ್ನು ಬಂಧಿಸಿ, ರಿಮ್ಯಾಂಡ್ ಹೋಮ್‌ಗೆ ಕಳುಹಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕಿ ಮೇಲೆ ನಿನ್ನೆ ರಾತ್ರಿ ಸೆಕ್ಯೂರಿಟಿ ಗರ್ಡ್ ಮತ್ತೆ ಅತ್ಯಾಚಾರ ಎಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ನಾವು ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಆರೋಪಿ ಖಾಸಗಿ ಕಂಪನಿಯ ಸೆಕ್ಯೂರಿಟಿ ಗರ್ಡ್ ತಪ್ಪಿಸಿಕೊಂಡಿದ್ದಾನೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಟಿ ಮ್ಯಾಥ್ಯೂ ಅವರು ಹೇಳಿದ್ದಾರೆ.
ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಆರೋಪಿ ಬಂಧನಕ್ಕಾಗಿ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.