ರಾಷ್ಟ್ರೀಯ

ಮೋದಿ ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ ಕುಗ್ಗಿದೆ: ಕಾಂಗ್ರೆಸ್ ನಾಯಕ

Pinterest LinkedIn Tumblr

modi-new

ನವದೆಹಲಿ: ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ದೇಶದಲ್ಲಿ ಭ್ರಷ್ಟಾಚಾರ ಕಡಿಮೆಯಾಗಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ನಾಯಕ ಬೇನಿ ಪ್ರಸಾದ್ ವರ್ಮಾ ಹೇಳಿದ್ದಾರೆ.

ಉತ್ತರ ಪ್ರದೇಶದಂತಹ ಕೆಲವು ರಾಜ್ಯಗಳನ್ನು ಹೊರತು ಪಡೆಸಿದರೆ, ದೇಶದಲ್ಲಿ ಭ್ರಷ್ಟಚಾರ ಗಣನೀಯವಾಗಿ ಕಡಿಮೆಯಾಗಿದೆ. ಈ ಹಿಂದೆ ಸಾಕಷ್ಟು ಅಸಹಿಷ್ಣುತೆ ಇತ್ತು. ಆದರೆ ಅದು ಈಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಅಖಿಲೇಶ್ ಯಾದವ್ ಸರ್ಕಾರದ ಕಾರ್ಯ ವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಉತ್ತರ ಪ್ರದೇಶದಲ್ಲಿ ಹೆಚ್ಚಾಗುತ್ತಿರುವ ಭ್ರಷ್ಟಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಬೇನಿ ಪ್ರಸಾದ್ 2007ರಲ್ಲಿ ಸಮಾಜವಾದಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು.

Write A Comment