ರಾಷ್ಟ್ರೀಯ

ಪ್ರಧಾನಿ ಭೇಟಿ: ‌‌ಪ್ರತಿಭಟನೆಗೆ ಮುಂದಾಗಿದ್ದ 150 ವಿದ್ಯಾರ್ಥಿಗಳ ಬಂಧನ

Pinterest LinkedIn Tumblr

5656ಕೊಯಮತ್ತೂರು(ಪಿಟಿಐ): ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕಾರ್ಮಿಕ ಸಚಿವ ಭಂಡಾರು ದತ್ತಾತ್ರೇಯ ಅವರ ಭೇಟಿ ವೇಳೆ ಕಪ್ಪು ಭಾವುಟ ಪ್ರದರ್ಶಿಸಿ ಪ್ರತಿಭಟನೆಗೆ ಮುಂದಾಗಿದ್ದ ವಿವಿಧ ವಿದ್ಯಾರ್ಥಿ ಹಾಗೂ ದಲಿತ ಸಂಘಟನೆಯ 150 ಕಾರ್ಯಕರ್ತರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಹೈದರಾಬಾದ್‌ ಕೇಂದ್ರೀಯ ವಿಶ್ವವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ಮೋದಿ ಹಾಗೂ ದತ್ತಾತ್ರೇಯ ಅವರ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದರು.

ಕೇಂದ್ರ ಕಾರ್ಮಿಕ ಸಚಿವರನ್ನು ತಕ್ಷಣ ಬಂಧಿಸಬೇಕು ಎಂದು ಪ್ರತಿಭಟನೆಗೆ ಮುಂದಾಗಿದ್ದ ಕಾರ್ಯಕರ್ತರು ಘೋಷಣೆ ಕೂಗಿದರು ಎಂದು ಪೊಲೀಸರು ತಿಳಿಸಿದ್ದಾರೆ.

Write A Comment