ರಾಷ್ಟ್ರೀಯ

ಲೋಕಸಭಾ ಮಾಜಿ ಸ್ಪೀಕರ್ ಬಲರಾಮ್ ಜಾಖರ್ ನಿಧನ

Pinterest LinkedIn Tumblr

Balram-Jakhar-Dead

ನವದೆಹಲಿ: ಲೋಕಸಭೆ ಮಾಜಿ ಸ್ಪೀಕರ್ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಲರಾಮ್ ಜಖರ್ ಅವರು ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.

ಬಲರಾಮ್ ಜಾಖರ್ ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರು 1980 ರಿಂದ 1989 ರವರೆಗೆ ಲೋಕಸಭೆ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಇವರ ಅಧಿಕಾರಾವಧಿಯಲ್ಲಿ ಸಂಸತ್ತಿನ ಕೆಲಸ ಕಾರ್ಯಗಳನ್ನು ಗಣಕೀಕರಣಗೊಳಿಸಲು ಶ್ರಮಿಸಿದರು.

ಜಾಖರ್ ಅವರು ಜೂನ್ 30, 2004ರಿಂದ ಮೇ 30, 2009ರವರೆಗೆ ಮಧ್ಯ ಪ್ರದೇಶದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಮಾಜಿ ಪ್ರಧಾನಿ ಪಿ.ವಿ.ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕೃಷಿ ಸಚಿವರಾಗಿಯೂ ಸಹ ಜಾಖರ್ ಅವರು ಕಾರ್ಯ ನಿರ್ವಹಿಸಿದ್ದರು.

Write A Comment