ಅಂತರಾಷ್ಟ್ರೀಯ

ಭಾರತ ಹಾಕಿ ತಂಡದ ನಾಯಕನ ವಿರುದ್ಧ ಲೈಂಗಿಕ ಕಿರುಕುಳ ಕೇಸ್ ದಾಖಲಿಸಿದ ಬ್ರಿಟಿಷ್ ಮಹಿಳೆ

Pinterest LinkedIn Tumblr

sardar-singh-physical-assault

ಲುಧಿಯಾನ: ಭಾರತ ಹಾಕಿ ತಂಡದ ನಾಯಕ ಸರ್ದಾರ್ ಸಿಂಗ್ ವಿರುದ್ಧ ಬ್ರಿಟಿಷ್ ಮಹಿಳೆ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಯತ್ನ ದೂರು ದಾಖಲಿಸಿದ್ದಾರೆ.

ಈಕೆ ಸರ್ದಾರ್ ಸಿಂಗ್ ಗೆಳತಿಯೇ ಆಗಿದ್ದು, 21ರ ಹರೆಯದ ಹಾಕಿ ಆಟಗಾರ್ತಿ, 2012ರಲ್ಲಿ ಲಂಡನ್ ಒಲಂಪಿಕ್ಸ್ ಸಮಯದಲ್ಲಿ ಸರ್ದಾರ್ ಸಿಂಗ್ ಅವರನ್ನು ಭೇಟಿ ಮಾಡಿದ್ದರು. ಅಲ್ಲಿಂದ ಇಬ್ಬರ ಸ್ನೇಹ ಬೆಳೆದಿದ್ದು, ನಾಲ್ಕು ವರ್ಷಗಳ ಕಾಲ ಜೊತೆಯಲ್ಲಿದ್ದರು.

ಆದರೆ, ಇದೀಗ ಯುವತಿ ಸರ್ದಾರ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರ ಯತ್ನ ದೂರು ದಾಖಲಿಸಿದ್ದು, ಮದುವೆಯಾಗುತ್ತೇನೆಂದು ನಂಬಿಸಿ ಈಗ ವಂಚಿಸಿದ್ದು, ನನಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಸರ್ದಾರ್ ಸಿಂಗ್ ವಿರುದ್ಧ ಇನ್ನು ಎಫ್ ಐಆರ್ ದಾಖಲಿಸಲಾಗಿಲ್ಲ, ದೂರನ್ನು ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಲುಧಿಯಾನದ ಪೊಲೀಸ್ ಕಮೀಷನರ್ ತಿಳಿಸಿದ್ದಾರೆ. ಪ್ರಸ್ತುತ ಸರ್ದಾರ್ ಸಿಂಗ್ ಹರ್ಯಾಣ ಪೊಲೀಸ್ ಇಲಾಖೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

Write A Comment