ನವದೆಹಲಿ (ಪಿಟಿಐ): ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಲೋಕ ಸಭಾಧ್ಯಕ್ಷ ಬಲರಾಂ ಜಾಖಡ್ ಬುಧವಾರ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ನಿಧನರಾದರು ಎಂದು ಅವರು ಕುಟುಂಬ ಮೂಲಗಳು ತಿಳಿಸಿವೆ.
ಬಲರಾಂ ಅವರು 1980 ರಿಂದ 1989ರವರೆಗೂ ಲೋಕಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಪಿ.ವಿ.ನರಸಿಂಹರಾವ್ ಅವರು ಪ್ರಧಾನಮಂತ್ರಿಯಾಗಿದ್ದಾಗ ಅವರ ಸಂಪುಟದಲ್ಲಿ ಕೃಷಿ ಮಂತ್ರಿಯಾಗಿದ್ದರು.ಮಧ್ಯಪ್ರದೇಶದ ರಾಜ್ಯಪಾಲರಾಗಿಯೂ ಬಲರಾಂ ಜಾಖಡ್ ಕಾರ್ಯನಿರ್ವಹಿಸಿದ್ದರು.