ನವದೆಹಲಿ (ಪಿಟಿಐ): ಮುಂಬರುವ ವಿಶ್ವ ಟ್ವೆಂಟಿ–20 ಮತ್ತು ಏಷ್ಯಾ ಕಪ್ ಟೂರ್ನಿಗೆ ಬಿಸಿಸಿಐ ಶುಕ್ರವಾರ ಭಾರತ ತಂಡವನ್ನು ಆಯ್ಕೆ ಮಾಡಿದ್ದು, ಕರ್ನಾಟಕದ ಮನೀಷ್ ಪಾಂಡೆ ಬದಲಿಗೆ ಅಜಿಂಕ್ಯ ರಹಾನೆ ಆಯ್ಕೆಯಾಗಿದ್ದಾರೆ.
ಭಾರತ ತಂಡ ಇತ್ತೀಚಿಗೆ ಆಸ್ಟ್ರೇಲಿಯಾ ಎದುರು ಆಡಿದ ಮೂರು ಪಂದ್ಯಗಳ ಟ್ವೆಂಟಿ–20 ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿತ್ತು. ಆ ಸರಣಿಯಲ್ಲಿ ಆಡಿದ ಬಹುತೇಕ ಆಟಗಾರರನ್ನು ವಿಶ್ವಕಪ್ ಮತ್ತು ಏಷ್ಯಾ ಕಪ್‌ಗೆ ಉಳಿಸಿಕೊಳ್ಳಲಾಗಿದೆ. ಆಲ್‌ರೌಂಡರ್ ಪವನ್ ನೇಗಿ ಆಯ್ಕೆಯಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಫೆಬ್ರುವರಿ 9ರಿಂದ ಪುಣೆಯಲ್ಲಿ ಶ್ರೀಲಂಕಾ ವಿರುದ್ಧದ ಸರಣಿ ನಡೆಯಲಿದ್ದು, ಐಸಿಸಿ ಟ್ವೆಂಟಿ–20 ರ್‍ಯಾಂಕಿಂಗ್‌ನಲ್ಲಿ ಅಗ್ರಸ್ಥಾನದಲ್ಲಿರುವ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಮಾರ್ಚ್‌ನಲ್ಲಿ ಬಾಂಗ್ಲಾದೇಶದಲ್ಲಿ ನಡೆಯುವ ಏಷ್ಯಾ ಕಪ್ ಟೂರ್ನಿಗೆ ಕೊಹ್ಲಿ ಮರಳಲಿದ್ದಾರೆ.
ತಂಡ ಇಂತಿದೆ: ಮಹೇಂದ್ರ ಸಿಂಗ್ ಧೋನಿ(ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶಿಖರ್ ಧವನ್, ಅಜಿಂಕ್ಯಾ ರಹಾನೆ, ಸುರೇಶ್ ರೈನಾ, ಯುವರಾಜ್ ಸಿಂಗ್, ಮೊಹಮ್ಮದ್ ಶಮಿ, ರವೀಂದ್ರ ಜಡೇಜಾ, ಆರ್.ಅಶ್ವಿನ್, ಹರ್ಭಜನ್ ಸಿಂಗ್, ಆಶಿಶ್ ನೆಹ್ರಾ, ಜಸ್ಪೀತ್ ಬೂಮ್ರಾ, ಹಾರ್ದಿಕ್ ಪಾಂಡ್ಯಾ, ಪವನ್ ನೇಗಿ.