ರಾಷ್ಟ್ರೀಯ

ಭಾರತ ವಿರೋಧಿ ಘೋಷಣೆ: ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷನ ಬಂಧನ

Pinterest LinkedIn Tumblr

ARRESTED-600

ನವದೆಹಲಿ: ಸಂಸತ್ ದಾಳಿಯ ರೂವಾರಿ ಅಫ್ಜಲ್ ಗುರುವನ್ನು ಗಲ್ಲಿಗೇರಿಸಿದ್ದನ್ನು ಖಂಡಿಸಿ ಜವಾಹರ್‍ಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‍ಯು)ದ ಕೆಲವು ವಿದ್ಯಾರ್ಥಿಗಳು ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷನನ್ನು ಬಂಧಿಸಲಾಗಿದೆ.

ಈ ಸಂಬಂಧ ಕೆಲವು ಅಪರಿಚಿತರನ್ನು ವಿರುದ್ಧ ದೇಶದ್ರೋಹದ ಕೇಸ್ ದಾಖಲಿಸಿದ್ದ ದೆಹಲಿ ಪೊಲೀಸರು, ಇಂದು ಜೆಎನ್ ಯು ಕ್ಯಾಂಪಸ್ ನಲ್ಲಿರುವ ವಸತಿ ನಿಲಯದಲ್ಲಿ ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ನನ್ನು ಬಂಧಿಸಿದ್ದಾರೆ.

ಸಂಸತ್ ಮೇಲೆ ದಾಳಿ ನಡೆಸಿದ ಆರೋಪಿ ಅಫ್ಜಲ್ ಗುರು ಗಲ್ಲಿಗೇರಿಸಿದ್ದನ್ನು ಖಂಡಿಸಿ, ವಿದ್ಯಾರ್ಥಿಗಳ ಗುಂಪೊಂದು ಕಾರ್ಯಕ್ರಮವೊಂದನ್ನು ಆಯೋಜಿಸಿತ್ತು. ಕಾರ್ಯಕ್ರಮದಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಲಾಗಿತ್ತು.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ರಾಜನಾಥ್ ಸಿಂಗ್, ಭಾರತ ವಿರೋಧಿ ಘೋಷಣೆಗಳನ್ನು ಕೂಗುತ್ತಾ, ಏಕತೆಯನ್ನು ಕದಡುವವರನ್ನು ಸುಮ್ಮನೆ ಬಿಡುವುದಿಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಅಲ್ಲದೆ ಜೆಎನ್ ಯುನಲ್ಲಿ ಕಾರ್ಯಕ್ರಮವೊಂದನ್ನು ಆಯೋಜಿಸಿ, ಭಾರತ ವಿರೋಧಿ ಚಟುವಟಿಕೆಯಲ್ಲಿ ಯಾರೆಲ್ಲ ಭಾಗವಹಿಸಿದ್ದರೋ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ದೆಹಲಿ ಪೊಲೀಸರಿಗೆ ರಾಜನಾಥ್ ಸಿಂಗ್ ಸೂಚಿಸಿದ್ದರು.

Write A Comment