ರಾಷ್ಟ್ರೀಯ

ಆರ್’ಎಸ್ಎಸ್ ತನ್ನ ಸಿದ್ದಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ: ರಾಹುಲ್ ಗಾಂಧಿ

Pinterest LinkedIn Tumblr

Rahul-gandhiನವದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್’ಎಸ್ಎಸ್) ತನ್ನ ದೋಷಪೂರಿತ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ.

ಜೆಎನ್ ಯು ವಿವಾದ ಕುರಿತಂತೆ ಇಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಆರ್’ಎಸ್ಎಸ್ ವಿರುದ್ಧ ಹರಿಹಾಯ್ದಿದ್ದು, ವಿದ್ಯಾರ್ಥಿಗಳ ಧ್ವನಿಯ್ನು ದಮನಮಾಡಲು ಆರ್’ಎಸ್ಎಸ್ ಯತ್ನ ನಡೆಸುತ್ತಿದ್ದು ತನ್ನ ಅವನತಿಯಾಗಿರುವ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲ ಹೇರುತ್ತಿದೆ ಎಂದು ಆರೋಪಿಸಿದ್ದಾರೆ.

ದೇಶದ ಅಭಿವೃದ್ಧಿ ಹಾಗೂ ಬೆಳವಣಿಕೆಯಾಗುತ್ತಿರುವುದು ವಿದ್ಯಾರ್ಥಿಗಳಿಂದ. ಆದರೆ, ಆರ್’ಎಸ್ಎಸ್ ತನ್ನ ದೋಷಪೂರಿತ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ. ಇದು ನಿಜಕ್ಕೂ ಈ ವರೆಗೂ ಎಂದೂ ನಡೆಯದ ದೊಡ್ಡ ಅಪರಾಧವಾಗಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಪಟಿಯಾಲ ಕೋರ್ಟ್ ಆವರಣದಲ್ಲಿ ನಡೆದ ಘಟನೆ ಕುರಿತಂತೆ ಕಿಡಿಕಾರಿದ ಅವರು, ಪತ್ರಕರ್ತರ ಮೇಲೆ ಯಾವ ರೀತಿಯಲ್ಲಿ ಹಲ್ಲೆ ನಡೆಸಲಾಯಿತು ಎಂಬುದನ್ನು ಇಡೀ ದೇಶದ ಜನತೆ ನೋಡಿದ್ದಾರೆ. ಘಟನೆ ವೇಳೆ ದೆಹಲಿ ಪೊಲೀಸರು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಈ ಘಟನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತ ವರ್ಚಸ್ಸು ಹಾಳಾಗುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ.

Write A Comment