ನವದೆಹಲಿ: ದೆಹಲಿ ಪ್ರೆಸ್ ಕ್ಲಬ್ ನಲ್ಲಿ ದೇಶದ್ರೋಹಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಲ್ಲಿ ವಿಶ್ವವಿದ್ಯಾಲಯ ನಿವೃತ್ತ ಪ್ರಾಧ್ಯಪಕ ಪ್ರೊ. ಎಸ್.ಎ.ಆರ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ.
ಫೆಬ್ರವರಿ 10ರಂದು ಪ್ರೆಸ್‌ಕ್ಲಬ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಅಫ್ಝಲ್ ಗುರುವಿಗೆ ಜೈಕಾರ ಕೂಗಿ ವಿವಾದ ಸೃಷ್ಟಿಸಿದ್ದ ಗಿಲಾನಿಯನ್ನು ಬಂಧಿಸಲಾಗಿತ್ತು. ಇಂದಿಗೆ ಗಿಲಾನಿ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಪಾಟಿಯಾಲ ಕೋರ್ಟ್ ಮುಂದೆ ಹಾಜರುಪಡಿಸಲಾಯಿತು.
ಪ್ರಕರಣ ವಿಚಾರಣೆ ನಡೆಸಿದ ಕೋರ್ಟ್ ಗಿಲಾನಿಗೆ 2 ವಾರಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಗಿಲಾನಿ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.