ಕೊಚ್ಚಿ: ಕಾಮಕ್ಕೆ ಕಣ್ಣಿಲ್ಲ ಎಂದು ಹೇಳುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ, ಇಲ್ಲೊಬ್ಬ ವಿಕೃತ ಕಾಮಿ ಹೆಣ್ಣು ನಾಯಿಯನ್ನು ತನ್ನ ಕಾಮಕ್ಕೆ ಬಳಸಿಕೊಂಡಿದ್ದಾನೆ. ಜಗತ್ತಿನಲ್ಲಿ ವಿಕೃತ ಕಾಮಿಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಉದಾಹರಣೆಯೆಂಬಂತೆ ಕೇರಳದಲ್ಲೊಂದು ಘಟನೆ ನಡೆದಿರುವುದಾಗಿ ವರದಿಯಾಗಿದೆ.
ಇಲ್ಲಿನ ವಿಕೃತ ಕಾಮುಕನೊಬ್ಬ ಹೆಣ್ಣು ನಾಯಿಯನ್ನು ಅತ್ಯಾಚಾರ ಮಾಡಿರುವ ಘಟನೆಯೊಂದು ಶುಕ್ರವಾರ ವರದಿಯಾಗಿದೆ.
ಕೇರಳದಲ್ಲಿ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದ್ದು, ಇದರ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣದಾದ್ಯಂತ ಹರಿದಾಡುತ್ತಿದೆ. 2 ನಿಮಿಷಗಳ ಕಾಲ ಇರುವ ಈ ವಿಡಿಯೋವೊಂದರಲ್ಲಿ ವ್ಯಕ್ತಿಯೋರ್ವ ನಾಯಿ ಮೇಲೆ ಅತ್ಯಾಚಾರವೆಸಗುತ್ತಿರುವುದು ಕಂಡು ಬಂದಿದೆ. ಅತ್ಯಾಚಾರ ಮಾಡಿರುವ ವ್ಯಕ್ತಿ ಮಲಯಾಳಂನಲ್ಲಿ ಮಾತನಾಡುತ್ತಿದ್ದು, ಅತ್ಯಾಚಾರವಾಗಿರುವ ನಿರ್ದಿಷ್ಟ ಪ್ರದೇಶದ ಕುರಿತಂತೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ.
ಇದೀಗ ಈ ವಿಡಿಯೋವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಣಿ ಹಕ್ಕುಗಳ ಸಂಘಟನೆಯವರು ಆರೋಪಿಯ ವಿರುದ್ಧ ಕಠಿಣ ಕ್ರಮಗೊಳ್ಳುವಂತೆ ಆಗ್ರಹಿಸಿದ್ದಾರೆ. ಅಲ್ಲದೆ ವಿಡಿಯೋ ಸಂಬಂಧಿಸಿ ದೂರು ದಾಖಲಿಸಿದ್ದಾರೆ.
ಪ್ರಕರಣ ಸಂಬಂಧ ಮಾತನಾಡಿರುವ ಸಂಘಟನೆ ಅಧ್ಯಕ್ಷರು, ಅತ್ಯಾಚಾರದ ವೇಳೆ ವ್ಯಕ್ತಿ ಮಲಯಾಳಂ ಭಾಷೆಯಲ್ಲಿ ಮಾತನಾಡುತ್ತಿದ್ದು, ಘಟನೆ ಸ್ಥಳವನ್ನು ನೋಡಿದರೆ ಕೇರಳ ರಾಜ್ಯದಲ್ಲಿಯೇ ನಡೆದಿರುವುದಾಗಿ ಶಂಕೆಗಳು ವ್ಯಕ್ತವಾಗುತ್ತಿದೆ. ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಹಿಡಿದುಕೊಟ್ಟವರಿಗೆ ರು. 1 ಲಕ್ಷ ಬಹುಮಾನವನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದರಂತೆ ಸಂಘಟನೆ ದಾಖಲಿಸಿರುವ ದೂರಿನ ಅನ್ವಯ ಕೇರಳ ರಾಜ್ಯ ಉಪ ಪೊಲೀಸ್ ಆಯುಕ್ತರು ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.