ನವದೆಹಲಿ: ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇಸ್ಲಾಂ ದೇಶಗಳಲ್ಲಿ ಪ್ರಚಲಿತ ಪದ್ಧತಿಗಳ ಪ್ರಕಾರ ಮಸೀದಿಯನ್ನು ಎಲ್ಲಿ ಬೇಕಾದರೂ ಸ್ಥಳಾಂತರಿಸಬಹುದು. ಉದಾಹರಣೆಗೆ ರಸ್ತೆ ನಿರ್ಮಾಣ ಸೇರಿದಂತೆ ಸಾರ್ಜಜನಿಕ ಅನೂಕೂಲಕ್ಕಾಗಿ ಸ್ಥಳಾಂತರಿಸಲಾಗುತ್ತದೆ.
ಆದರೆ, ದೇವಸ್ಥಾನಗಳನ್ನು ಸ್ಥಳಾಂತರಿಸಲು ಸಾಧ್ಯವಿಲ್ಲ. ಆಯೋಧ್ಯೆಯಲ್ಲಿ ಮಸೀದಿ ನಿರ್ಮಾಣ ಮಾಡಬೇಕೆಂಬುದನ್ನು ಬಿಟ್ಟು, ಅಯೋಧ್ಯೆಯ ಸರಯೂ ನದಿ ದಡದಲ್ಲಿ ಮುಸ್ಲಿಮರು ಬಾಬ್ರಿ ಮಸೀದಿ ನಿರ್ಮಿಸಿಕೊಳ್ಳಬಹುದು. ಆದರೆ, ಪ್ರಸ್ತುತ ಜಾಗದಲ್ಲೇ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಅವರು ಹೇಳಿದ್ದಾರೆ.
ಈಗಾಗಲೇ ರಾಮ ಮಂದಿರ ಮತ್ತು ಬಾಬ್ರಿ ಮಸೀದಿಗೆ ಸಂಬಂಧಿಸಿದಂತೆ ಸಾಕಷ್ಟು ಅರ್ಜಿಗಳಿವೆ. ಅವುಗಳ ಪಟ್ಟಿಯಲ್ಲಿ ನಿಮ್ಮ ಅರ್ಜಿಯನ್ನು ಸೇರಿಸಲಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.