ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 26 ಮಂದಿ ಗಾಯಗೊಂಡಿದ್ದಾರೆ.
ಗುರುವಾರ ರಾತ್ರಿ 45 ಪ್ರಯಾಣಿಕರಿದ್ದ ಬಸ್ ಚಂಬಿಧಾರ್ ಪ್ರದೇಶದಿಂದ ಸೊಲಾನ್ ಜಿಲ್ಲೆಗೆ ಪ್ರಯಾಣಿಸುತ್ತಿದ್ದ ಸಂದರ್ಭ ಅವಘಡ ಸಂಭವಿಸಿದೆ. ರಾಜಗಢದ ರಕ್ಷಣಾ ಸಿಬ್ಬಂದಿ ಘಟನಾ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.