ರಾಷ್ಟ್ರೀಯ

ಯುದ್ಧದಲ್ಲಿ ಮಹಿಳೆಯರಿಗೆ ಅವಕಾಶ: ಮನೋಹರ್ ಪರಿಕ್ಕರ್

Pinterest LinkedIn Tumblr

parikkar-womenನವದೆಹಲಿ: ಸೇನಾ ಕಾರ್ಯಾಚರಣೆಯಲ್ಲಿ ಈ ಹಿಂದೆ ಮಹಿಳೆಯರ ನೇಮಕವನ್ನು ತಿರಸ್ಕರಿಸಿದ್ದ ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಇದೀಗ ಮಹಿಳೆಯರ ನೇಮಕಾತಿಗೆ ಒಪ್ಪಿಗೆ ಸೂಚಿಸಿದ್ದು, ಯುದ್ಧ ಕಾರ್ಯಾಚಣೆಯಲ್ಲಿ ಪಾಲ್ಗೊಳ್ಳಲು ಮಹಿಳೆಯರಿಗೆ ಹಂತ ಹಂತವಾಗಿ ಅವಕಾಶಗಳನ್ನು ನೀಡಲಾಗುತ್ತದೆ ಎಂದು ಗುರುವಾರ ಹೇಳಿದ್ದಾರೆ.

ಈ ಕುರಿತಂತೆ ನಿನ್ನೆ ಮಾತನಾಡಿರುವ ಅವರು, ಮಹಿಳೆಯರಿಗೆ ನೀಡಬೇಕಿರುವ ತರಬೇತಿ ಹಾಗೂ ಸೌಕರ್ಯಗಳ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಕಾಲಾನುಕ್ರಮಕ್ಕನುಗುಣವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಯುದ್ಧ ಸಂದರ್ಭದಲ್ಲಿ ಮಹಿಳೆಯರ ನೇಮಕ ವಿಚಾರದಲ್ಲಿ ಹಲವು ಅಂಶಗಳನ್ನು ಪರಿಗಣಿಸಬೇಕಾಗುತ್ತದೆ. ಈ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದ್ದು, ಶೀಘ್ರದಲ್ಲೇ ಹಂತಹಂತವಾಗಿ ಮಹಿಳೆಯರಿಗೆ ಅವಕಾಶನ್ನು ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ಮಂಗಳವಾರವಷ್ಟೇ ಬಜೆಟ್ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು, ಮುಂದಿನ ದಿನಗಳಲ್ಲಿ ಯುದ್ಧ ಕಾರ್ಯಾಚರಣೆಗಳಲ್ಲಿ ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದರು. ಈ ಬೆನ್ನಲ್ಲೇ ಇದೀಗ ರಕ್ಷಣಾ ಸಚಿವರು ಕೂಡ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದಾರೆ.

Write A Comment