ರಾಷ್ಟ್ರೀಯ

ಸೋನಿಯಾ, ರಾಹುಲ್ ನನಗೆ ನಾಯಕರು: ಸಿಎಂ

Pinterest LinkedIn Tumblr

CM_Sid-e1456488595180ದೆಹಲಿ: ಸಿಎಂಗೆ ಕಾಂಗ್ರೆಸ್ ಸಂಸ್ಕ್ರತಿ ಗೊತ್ತಿಲ್ಲ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್‌ಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ನನಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನಾಯಕರಾಗಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯ ಸರಕಾರಕ್ಕೆ ಮೇಜರ್ ಸರ್ಜರಿ ಮಾಡುವ ಅಗತ್ಯವಿದೆ ಎಂದು ಹೇಳಿಕೆ ನೀಡಿದ್ದ ಬಿ.ಕೆ.ಹರಿಪ್ರಸಾದ್, ಮುಖ್ಯಮಂತ್ರಿ ಬದಲಾವಣೆ ಮಾಡುವ ಕುರಿತಂತೆ ಪರೋಕ್ಷ ಹೇಳಿಕೆ ನೀಡಿದ್ದರು.

ಹರಿಪ್ರಸಾದ್ ಹೇಳಿಕೆಯಿಂದ ಆಕ್ರೋಶಗೊಂಡಿರುವ ಸಿಎಂ ಸಿದ್ದರಾಮಯ್ಯ, ನನ್ನ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಇತರರಿಂದ ಸಲಹೆ ಪಡೆಯುವ ಅಗತ್ಯತೆ ನನಗಿಲ್ಲ ಎಂದು ಗುಡುಗಿದ್ದರು.

ನನಗೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ನಾಯಕರಿದ್ದಂತೆ, ಭೈರತಿ ಸುರೇಶ್ ಕೂಡಾ ಕಾಂಗ್ರೆಸ್ ಪಕ್ಷದ ಸಹ ಸದಸ್ಯರಾಗಿದ್ದಾರೆ ಎನ್ನುವುದು ಸತ್ಯವಲ್ಲವೇ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್‌ಗೆ ಸಿಎಂ ಪ್ರಶ್ನಿಸಿದ್ದಾರೆ.

Write A Comment