ರಾಷ್ಟ್ರೀಯ

ಪ್ರಭಾವಶಾಲಿ ಭಾರತೀಯರ ಪಟ್ಟಿಯಲ್ಲಿ ನರೇಂದ್ರ ಮೋದಿ ನಂಬರ್ ಒನ್, ಮೋಹನ್ ಭಾಗವತ್‌ಗೆ 2ನೇ ಸ್ಥಾನ

Pinterest LinkedIn Tumblr

Narendra Modi And Mohan Bhagat

ನವದೆಹಲಿ: ದೇಶದ 100 ಪ್ರಭಾವಶಾಲಿ ಭಾರತೀಯರ ಪಟ್ಟಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಗ್ರ ಸ್ಥಾನ ಪಡೆದಿದ್ದಾರೆ. ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಎರಡನೇ ಸ್ಥಾನ ಪಡೆದಿದ್ದಾರೆ.

ಅಸಹಿಷ್ಣುತೆ, ಬಿಹಾರ ಚುನಾವಣೆ ಸೋಲು, ರೋಹಿತ್ ವೆಮುಲಾ ಆತ್ಮಹತ್ಯೆ, ಜೆಎನ್‌ಯು ವಿವಾದ ಸೇರಿದಂತೆ ಹಲವು ವಿವಾದಗಳ ಮಧ್ಯೆಯೂ ಪ್ರಧಾನಿ ಮೋದಿ ಜನಪ್ರಿಯತೆಗೆ ಯಾವುದೇ ರೀತಿಯ ಧಕ್ಕೆಯಾಗಿಲ್ಲ ಎಂದು ಸಮೀಕ್ಷೆ ತಿಳಿಸಿದೆ.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಎರಡನೇ ಸ್ಥಾನ ಪಡೆದಿದ್ದಾರೆ. ಕೇಂದ್ರ ಸರ್ಕಾರದಿಂದ ದೂರವಿರುವುದಾಗಿ ಆರೆಸ್ಸೆಸ್ ಭರವಸೆ ನೀಡಿದ್ದರೂ ಪ್ರಧಾನಿ ಮೋದಿಗೆ ಸಂಘ ಪರಿವಾರದ ಸಂಪೂರ್ಣ ಬೆಂಬಲವಿದೆ ಎಂದು ಸಮೀಕ್ಷೆಯಲ್ಲಿ ಪ್ರಕಟಿಸಲಾಗಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೂರನೇ ಸ್ಥಾನ ಪಡೆದಿದ್ದರೆ, ಅರುಣ್ ಜೇಟ್ಲಿ ಮತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕ್ರಮವಾಗಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದಿದ್ದಾರೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಒಂಬತ್ತನೇ ಸ್ಥಾನ ಪಡೆದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 8ನೇ ಸ್ಥಾನ ಪಡೆದಿದ್ದಾರೆ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ, ಸಲ್ಮಾನ್ ಖಾನ್, ಶಾರುಕ್ ಖಾನ್, ವಿರಾಟ್ ಕೊಹ್ಲಿ, ಸೈನಾ ನೆಹ್ವಾಲ್, ಸಾನಿಯಾ ಮಿರ್ಜಾ, ದೀಪಿಕಾ ಪಡುಕೋಣೆ ಮತ್ತು ಪ್ರಿಯಾಂಕಾ ಚೋಪ್ರಾ ಕೂಡಾ 100 ಪ್ರಭಾವಶಾಲಿ ಭಾರತೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Write A Comment