ರಾಷ್ಟ್ರೀಯ

ಜೆಎನ್ ಯು ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಗೆ ಷರತ್ತುಬದ್ಧ ಜಾಮೀನು

Pinterest LinkedIn Tumblr

kana

ನವದೆಹಲಿ: ದೇಶದ್ರೋಹದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.

ಕನ್ಹಯ್ಯ ಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಪ್ರತಿಭಾ ರಾಣಿ ಅವರು, ಕನ್ಹಯ್ಯ ಕುಮಾರ್ ಗೆ 6 ತಿಂಗಳ ಕಾಲ ಮಧ್ಯಂತರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಅಲ್ಲದೆ ಪೊಲೀಸರ ತನಿಖೆಗೆ ಸಹಕರಿಸುವಂತೆ ಆರೋಪಿಗೆ ಸೂಚಿಸಿದ್ದಾರೆ.

ಸಂಸತ್ತು ದಾಳಿ ರೂವಾರಿ ಅಫ್ಜಲ್ ಗುರುವಿಗೆ ಮರಣದಂಡನೆ ನೀಡಿ ಮೂರು ವರ್ಷವಾದ ಹಿನ್ನೆಲೆಯಲ್ಲಿ ಫೆಬ್ರವರಿ 9ರಂದು ಜವಹರಲಾಲ ನೆಹರೂ ವಿಶ್ವವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಆರೋಪದ ಮೇಲೆ ಕನ್ಹಯ್ಯ ಕುಮಾರ್ ಅವರನ್ನು ದೆಹಲಿ ಪೊಲೀಸರು ಫೆಬ್ರವರಿ 12ರಂದು ಬಂಧಿಸಿದ್ದರು.

Write A Comment