ಮನೋರಂಜನೆ

ಏಷ್ಯಾಕಪ್ ಟಿ20: ಪಾಕಿಸ್ತಾನ ವಿರುದ್ಧ ಬಾಂಗ್ಲಾದೇಶಕ್ಕೆ 5 ವಿಕೆಟ್ ಗಳ ಭರ್ಜರಿ ಜಯ; ಫೈನಲ್ ನಲ್ಲಿ ಬಾಂಗ್ಲಾದೇಶ-ಭಾರತ ಹಣಾಹಣಿ

Pinterest LinkedIn Tumblr

bangla

ಮೀರ್ ಪುರ: ಏಷ್ಯಾಕಪ್ ಟಿ20 ಟೂರ್ನಿ ನಿಮಿತ್ತ ಬುಧವಾರ ನಡೆದ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅತಿಥೇಯ ಬಾಂಗ್ಲಾದೇಶ 5 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಕಳೆದ ಪಂದ್ಯದಲ್ಲಿ ವಿಶ್ವ ಚಾಂಪಿಯನ್ ಶ್ರೀಲಂಕಾಕ್ಕೆ ಆಘಾತ ನೀಡಿದ್ದ ಬಾಂಗ್ಲಾದೇಶ ತಂಡ, ಬುಧವಾರ 2009ರ ವಿಶ್ವಚಾಂಪಿಯನ್ ಪಾಕಿಸ್ತಾನ ತಂಡಕ್ಕೆ ಆಘಾತಕಾರಿ ಸೋಲು ನೀಡುವ ಮೂಲಕ ಏಷ್ಯಾಕಪ್ ಟಿ20 ಟೂರ್ನಿಯ ಫೈನಲ್​ಗೇರಿದೆ.

ಶೇರ್ ಎ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ಸರ್ಫ್ರಾಜ್ ಅಹ್ಮದ್ (58 ರನ್, 42 ಎಸೆತ, 5 ಬೌಂಡರಿ, 2 ಸಿಕ್ಸರ್) ಅವರ ಸಮಯೋಚಿತ ಆಟದಿಂದ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್​ಗೆ 129 ರನ್ ಪೇರಿಸಿತ್ತು. ಈ ಸಾಧಾರಣ ಮೊತ್ತವನ್ನು ಬೆನ್ನು ಹತ್ತಿದ ಬಾಂಗ್ಲಾ 19.1 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ​ 131 ರನ್ ಬಾರಿಸಿ 5 ವಿಕೆಟ್​ಗಳಿಂದ ಗೆಲುವು ಸಾಧಿಸಿತು.

ಅಲ್ಪ ಮೊತ್ತ ಬೆನ್ನಟ್ಟಿದ ಬಾಂಗ್ಲಾ ತಂಡ ಸೌಮ್ಯ ಸರ್ಕಾರ್ 48 ರನ್ ಮತ್ತು ಮಹಮದುಲ ಅವರ ಅಜೇಯ 22 ರನ್ ನೆರವಿನಿಂದ ಇನ್ನೂ 5 ಎಸೆತ ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತು. ಆ ಮೂಲಕ ಏಷ್ಯಾಕಪ್ ಸರಣಿಯ ಫೈನಲ್ ಗೆ ಬಾಂಗ್ಲಾದೇಶ ಅಡಿ ಇಟ್ಟಿದ್ದು, ಫೈನಲ್ ನಲ್ಲಿ ಭಾರತವನ್ನು ಎದುರಿಸಲಿದೆ.

Write A Comment