
ಕಾನ್ಪುರ: ನಮ್ಮ ತಂದೆಯ ಜೀವ ಉಳಿಸಿ ಎಂದು ಇಬ್ಬರು ಮಕ್ಕಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ನಮ್ಮ ತಂದೆ ಸರೋಜ್ ಮಿಶ್ರಾ(50) ಅಸ್ತಮಾ ರೋಗದಿಂದ ಬಳಲುತ್ತಿದ್ದು, ಅವರನ್ನು ಉಳಿಸಿ ಎಂದು ಕಾನ್ಪುರ್ ಜಿಲ್ಲೆಯ ಇಬ್ಬರು ಮಕ್ಕಳು ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದಾರೆ.
ವೃತ್ತಿಯಲ್ಲಿ ಟೈಲರ್ ಆಗಿರುವ ಮಿಶ್ರಾ ಅವರು ಕಳೆದ ಎರಡು ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದರು. ತೀವ್ರ ಬಡವರಾಗಿದ್ದ ಇವರಿಗೆ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಅವರ ಇಬ್ಬರು ಮಕ್ಕಳು ಪ್ರಧಾನಿ ಕಚೇರಿಗೆ ಸಹಾಯಕ್ಕಾಗಿ ಪತ್ರ ಬರೆದಿದ್ದರು.
ಪ್ರಧಾನ ಮಂತ್ರಿ ಕಾರ್ಯಾಲಯವು ಸರೋಶ್ ಮಿಶ್ರಾಗೆ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾ ಆಸ್ಪತ್ರೆಗೆ ಸೂಚಿಸಿದೆ.
ಮಿಶ್ರಾ ಅವರಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಪ್ರಧಾನಿ ಮಂತ್ರಿ ಕಾರ್ಯಾಲಯ ಸೂಚಿಸಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ವೈದ್ಯಕೀಯ ಮುಖ್ಯಸ್ಥ ರಾಮಾಯಣ್ ಪ್ರಸಾದ್ ತಿಳಿಸಿದ್ದಾರೆ.