ರಾಷ್ಟ್ರೀಯ

ಉ.ಪ್ರದೇಶದಲ್ಲಿ ಪ್ರಿಯಾಂಕ ಗಾಂಧಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ?

Pinterest LinkedIn Tumblr

priyanka

ಲಖನೌ: ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್, ಚುನಾವಣೆಯನ್ನು ಗೆಲ್ಲಲು ಪ್ರಿಯಾಂಕ ಗಾಂಧಿ ಅವರನ್ನು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸುವ ಸಾಧ್ಯತೆ ಇದೆ.

2017ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಸಹೋದರಿ ಪ್ರಿಯಾಂಕ ಗಾಂಧಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವಂತೆ ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಅವರು ಪಕ್ಷದ ಹೈಕಮಾಂಡ್ ಗೆ ಮನವಿ ಮಾಡಲಿದ್ದಾರೆ ಎಂದು ದಿ ಎಕನಾಮಿಕ್ ಟೈಮ್ಸ್ ವರದಿ ಮಾಡಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳೆದ ಬಿಹಾರ ವಿಧಾಸಭೆ ಚುನಾವಣೆಯಲ್ಲಿ ನಿತಿಶ್ ಕುಮಾರ್ ಅವರ ಭರ್ಜರಿ ಗೆಲುವಿಗೆ ಕಾರಣವಾಗಿದ್ದ ಖ್ಯಾತ ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಅವರು ಈಗ ಮುಂಬರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ತಂತ್ರ ರೂಪಿಸುವ ಹೊಣೆ ವಹಿಸಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 80 ಸ್ಥಾನಗಳ ಪೈಕಿ ಕೇವಲು ಎರಡು ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿತ್ತು. ಅಲ್ಲದೆ 403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾಸಭೆಯಲ್ಲಿ ಕಾಂಗ್ರೆಸ್ ಕೇವಲ 29 ಶಾಸಕರನ್ನು ಹೊಂದಿದೆ.

Write A Comment