ನವದೆಹಲಿ, ಮಾ.3- ದಿ.ಪ್ರಧಾನಿ ರಾಜೀವ್‌ಗಾಂಧಿಯವರ ಹಂತಕರನ್ನು ಕಾರಾಗೃಹದಿಂದ ಬಿಡುಗಡೆ ಮಾಡುವುದು ಅಥವಾ ಮಾಡದೆ ಇರುವುದು ಕೇಂದ್ರ ಸರ್ಕಾರದ ವಿವೇಚನೆಗೆ ಬಿಟ್ಟದ್ದು. ಈ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯ ತಿಳಿಸಲು ನಾನು ಬಯಸುವುದಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ (ರಾಜೀವ್ ಪುತ್ರ) ರಾಹುಲ್‌ಗಾಂಧಿ ತಿಳಿಸಿದ್ದಾರೆ.
1991ರಲ್ಲಿ ಶ್ರೀಲಂಕಾ ತಮಿಳು ಉಗ್ರರು ನಡೆಸಿದ ಆತ್ಮಾಹುತಿ ಬಾಂಬರ್ ದಾಳಿಯಲ್ಲಿ ಅಂದಿನ ಪ್ರಧಾನಿ ರಾಜೀವ್‌ಗಾಂಧಿ ಅವರು ಸಾವನ್ನಪ್ಪಿದ್ದು, ಆರೋಪಿಗಳಿಗೆ ಮರಣ ದಂಡನೆ ಶಿಕ್ಷೆಯಾಗಿತ್ತು. ಆದರೆ, ನಂತರ ಅದನ್ನು ಜೀವಾವಧಿ ಶಿಕ್ಷೆಗೆ ಮಾರ್ಪಡಿಸಲಾಗಿತ್ತು.
ತಮಿಳುನಾಡು ಸರ್ಕಾರ ಹಂತಕರ ಬಿಡುಗಡೆಗೆ ಆದೇಶಿಸಿತ್ತು. ಆದರೆ, ಕಾಂಗ್ರೆಸ್ ಅದನ್ನು ವಿರೋಧಿಸಿತ್ತು. ಈಗ ಮತ್ತೆ ಜಯಲಲಿತಾ ಸರ್ಕಾರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.