ರಾಷ್ಟ್ರೀಯ

ಕೋಲ್ಕತಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

Pinterest LinkedIn Tumblr

culಕೊಲ್ಕತ್ತಾ: ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀ ಯ ವಿಮಾನ ನಿಲ್ದಾಣ 24 ಗಂಟೆಗಳಲ್ಲಿ ಸ್ಪೋಟಗೊಳಿಸುವುದಾಗಿ ಬೆದರಿಕೆ ಸಂದೇಶವೊಂದು ಬಂದಿದೆ.

ಇಂದು ಮುಂಜಾನೆ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವ್ಯವಸ್ಥಾಪಕರ ಇಮೇಲ್ ಗೆ ಇನ್ನು 24 ಗಂಟೆಗಳಲ್ಲಿ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಸಂದೇಶವೊಂದು ರವಾನೆಯಾಗಿದೆ. ಈ ಹಿನ್ನಲೆಯಲ್ಲಿ ನಿಲ್ಧಾಣದ ಸುತ್ತ ಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು ಸಂಶಯಾಸ್ಪದ ವ್ಯಕ್ತಿಗಳ ಮೇಲೆ ನಿಗಾ ಇಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಲ್ದಾಣದ ಸೈಬರ್ ಕ್ರೈಮ್ ವಿಭಾಗದವರು ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ, ಪ್ರಾಥಮಿಕ ಮಾಹಿತಿಗಳ ಪ್ರಕಾರ ಜೆರ್ಮನಿಯಿಂದ ಇಮೇಲ್ ಸಂದೇಶ ರವಾನೆಯಾಗಿದ್ದು ಅಧಿಕಾರಿಗಳನನ್ನು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Write A Comment