ರಾಷ್ಟ್ರೀಯ

ಅಕಾಲಿಕವಾಗಿ ಭಾರೀ ಮಳೆಯಿಂದ ಮನೆ ಕುಸಿದು ಒಂದೇ ಕುಟುಂಬದ ಐವರ ದಾರುಣ ಸಾವು

Pinterest LinkedIn Tumblr

rainಮೀರತ್, ಮಾ.13- ಕಳೆದ ರಾತ್ರಿಯಿಂದ ಅಕಾಲಿಕವಾಗಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಎರಡು ಅಂತಸ್ತಿನ ಮನೆಯೊಂದು ಕುಸಿದು ಬಿದ್ದು ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿದ್ದು, ಇತರ ಆರು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ಇಂದು ಮುಂಜಾನೆ ಸಂಭವಿಸಿದೆ.

ಮೀರತ್ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿನ್ನೆ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಈ ಭಾಗದಲ್ಲಿ ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ. ಪರಿಹಾರ ಕಾರ್ಯಗಳು ಭರದಿಂದ ಸಾಗಿವೆ. ಭಾರೀ ಮಳೆಯಿಂದ ರಕ್ಷಣಾ ಕಾರ್ಯಕ್ಕೆ ಅಡಚಣೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನೂ ಹೆಚ್ಚಿನ ಮಾಹಿತಿಗಳು ಸದ್ಯಕ್ಕೆ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

Write A Comment