ರಾಷ್ಟ್ರೀಯ

ಬಾಂಬ್‌ ಬೆದರಿಕೆ: ದೆಹಲಿಯಲ್ಲಿ ಎರಡು ವಿಮಾನಗಳ ತಪಾಸಣೆ

Pinterest LinkedIn Tumblr

vimmmmನವದೆಹಲಿ (ಏಜಿನ್ಸಿಸ್‌): ಬಾಂಬ್‌ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಇಂದಿರಾ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 2 ವಿಮಾನಗಳಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ ನಡೆಸಿದ ಘಟನೆ ಗುರುವಾರ ನಡೆದಿದೆ.
ದೆಹಲಿಯಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಏರ್‌ ಇಂಡಿಯಾ ವಿಮಾನ ಹಾಗೂ ದೆಹಲಿಯಿಂದ ಕಾಠ್ಮಂಡುವಿಗೆ ತೆರಳುತ್ತಿದ್ದ ನೇಪಾಳ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ತಪಾಸಣೆ ನಡೆಸಲಾಯಿತು ಎಂದು ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಗುಡ್‌ಗಾಂವ್‌ನ ಕಾಲ್‌ ಸೆಂಟರ್‌ವೊಂದರಿಂದ ಬಾಂಬ್‌ ಇಡಲಾಗಿದೆ ಎಂಬ ಬೆದರಿಕರ ಕರೆ ಬಂದ ಕೂಡಲೇ ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿಗಳು ತಪಾಸಣೆ ನಡೆಸಿದ್ದಾರೆ.
ಏರ್‌ ಇಂಡಿಯಾ ವಿಮಾನದಲ್ಲಿ ನಾಲ್ವರು ಸಂಸದರೂ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Write A Comment