ರಾಷ್ಟ್ರೀಯ

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರ ಎನ್ ಕೌಂಟರ್: ಮುಂದುವರೆದ ಕಾರ್ಯಾಚರಣೆ

Pinterest LinkedIn Tumblr

attack

ಶ್ರೀನಗರ: ಇಂದು ಭದ್ರತಾ ದಳ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.

ಶುಕ್ರವಾರ ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಎಂಬ ಪ್ರದೇಶದಲ್ಲಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಲಾಗಿದೆ.

ಬೀಗ್ ಮೊಹಲ್ಲಾ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿದ್ದರು, ಕಾರ್ಯಾಚರಣೆ ಮಾಡುವ ವೇಳೆ ಉಗ್ರರು ಅಡಗಿದ್ದ ಮನೆಯನ್ನು ಭದ್ರತಾ ಪಡೆ ಸುತ್ತುವರೆದಿದೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಇಬ್ಬರು ಉಗ್ರರನ್ನು ಎನ್ ಕೌಂಟರ್ ಮಾಡಿದ್ದಾರೆ.
ಆ ಮನೆಯಲ್ಲಿ ಇನ್ನು ಉಗ್ರರು ಅಡಗಿದ್ದು, ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Write A Comment