ರಾಷ್ಟ್ರೀಯ

ಉ.ಪ್ರದೇಶ: ಪೊಲೀಸ್ ವಶದಲ್ಲಿದ್ದ ವ್ಯಕ್ತಿ ಸಾವು, 14 ಅಧಿಕಾರಿಗಳ ಅಮಾನತು

Pinterest LinkedIn Tumblr

lockup-19ಕಾನ್ಪುರ: ಕಳ್ಳತನ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾಗಿದ್ದ 32 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತ ಉತ್ತರ ಪ್ರದೇಶ ಸರ್ಕಾರ 14 ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಅಲ್ಲದೆ ಘಟನೆ ಕುರಿತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.
ಈ ಮಧ್ಯೆ ಪೊಲೀಸರು ಮೃತ ಆರೋಪಿ ಝೀಶಾನ್ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ತೀವ್ರ ಅನಾರೋಗ್ಯಕ್ಕೀಡಾಗಿ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ. ಆದರೆ ಪೊಲೀಸರ ಹೇಳಿಕೆಯನ್ನು ತಳ್ಳಿಹಾಕಿರುವ ಆರೋಪಿಯ ಸಂಬಂಧಿಗಳು, ಪೊಲೀಸರು ಠಾಣೆಯಲ್ಲಿ ಹೊಡೆದು ಸಾಯಿಸಿದ್ದಾರೆ ಎಂದು ದೂರಿದ್ದಾರೆ.
ಕೇಶಿಗಾಂವ ನಿವಾಸಿಯಾಗಿರುವ ಝೀಶಾನ್ ನನ್ನು ಕಳೆದ ಬುಧವಾರ ಕಳ್ಳತನ ಪ್ರಕರಣವೊಂದರಲ್ಲಿ ಬಂಧಿಸಲಾಗಿತ್ತು. ಇದಕ್ಕು ಮುನ್ನ ಆತ ಆತ್ಮಹತ್ಯೆಗೆ ಯತ್ನಿಸಿ ಅಸ್ವಸ್ಥಗೊಂಡಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪುಷ್ಪಾಂಜಲಿ ಸಿಂಗ್ ಅವರು ತಿಳಿಸಿದ್ದಾರೆ.
ಆರೋಪಿಯ ಸಂಬಂಧಿಗಳ ಹೇಳಿಕೆಯನ್ನು ಆಧರಿಸಿ ಝೀಶಾನ್ ನನ್ನು ಬಂಧಿಸಿದ ವಿಶೇಷ ಕಾರ್ಯಾಚರಣೆ ತಂಡದ ವಿರುದ್ಧ ಕೇಸ್ ದಾಖಲಿಸಲಾಗಿದೆ ಮತ್ತು ಘಟನೆಗೆ ಸಂಬಂಧಿಸಿದಂತೆ ಇನ್ಸ್ ಪೆಕ್ಟರ್ ಹಾಗೂ ಇತರೆ ಮೂವರು ಪೊಲೀಸ್ ಅಧಿಕಾರಿಗಳು ಸೇರಿದಂತೆ ಸ್ಥಳದಲ್ಲಿದ್ದ 14 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Write A Comment