ರಾಷ್ಟ್ರೀಯ

‘ಎಸಿಬಿ’ ರಚನೆಗೆ ಕಾಂಗ್ರೆಸ್ ಹೈಕಮಾಂಡ್‌ ಅಸಮಾಧಾನ

Pinterest LinkedIn Tumblr

SIDDUWEBನವದೆಹಲಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರಚಿಸುವುದರ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಹಿರಿಯ ಕಾಂಗ್ರೆಸ್‌ ಮುಖಂಡರೊಬ್ಬರ ಪ್ರಕಾರ, ಎಸಿಬಿ ರಚಿಸುವ ಮೂಲಕ ಭ್ರಷ್ಟ ಅಧಿಕಾರಿಗಳನ್ನು ಮತ್ತು ರಾಜಕಾರಣಿಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನುವ ಭಾವನೆ ಜನಸಾಮಾನ್ಯರಲ್ಲಿದೆ. ವಿಶೇಷವಾಗಿ ನಾಗರಿಕ ಸಮುದಾಯ ‘ಎಸಿಬಿ’ ರಚನೆಗೆ ವಿರೋಧ ವ್ಯಕ್ತಪಡಿಸಿದೆ. ಇದನ್ನು ಲೆಕ್ಕಿಸದೆ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿರುವುದು ಹೈಕಮಾಂಡ್‌ ಅಸಮಾಧಾನಕ್ಕೆ ಕಾರಣವಾಗಿದೆ, ಇದು ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಅವರು ಪ್ರಜಾವಾಣಿ ಸಹೋದರ ಪತ್ರಿಕೆ ‘ಡೆಕ್ಕನ್‌ ಹೆರಾಲ್ಡ್‌’ಗೆ ತಿಳಿಸಿದರು.

‘ಎಸಿಬಿ’ ರಚನೆಯಿಂದ ಲೋಕಾಯುಕ್ತ ಅಸ್ಥಿರಗೊಳ್ಳುತ್ತದೆ. ಇದರಿಂದ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ – 1988ರ ಅಡಿ ದೂರುಗಳನ್ನು ದಾಖಲಿಸಿಕೊಳ್ಳುವ, ತನಿಖೆ ನಡೆಸುವ ಅಧಿಕಾರ ಲೋಕಾಯುಕ್ತ ಪೊಲೀಸರಿಗೆ ಇರುವುದಿಲ್ಲ. ರಾಜಕಾರಣಿಗಳು, ಭ್ರಷ್ಟ ಅಧಿಕಾರಿಗಳ ವಿರುದ್ಧದ ಸಾಕಷ್ಟು ಪ್ರಕರಣಗಳು ಲೋಕಾಯುಕ್ತದಲ್ಲಿ ಇನ್ನೂ ತನಿಖೆಯಾಗದೆ ಉಳಿದಿದೆ. ಇಂತಹ ಸಂದರ್ಭದಲ್ಲಿ ‘ಎಸಿಬಿ’ ರಚನೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಡೆ ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತದೆ ಎಂದರು.

Write A Comment