ರಾಷ್ಟ್ರೀಯ

ಮೆಹಬೂಬಾ ಮುಫ್ತಿ ಮುಖ್ಯಮಂತ್ರಿ, ನಿರ್ಮಲ್ ಸಿಂಗ್ ಉಪಮುಖ್ಯಮಂತ್ರಿ

Pinterest LinkedIn Tumblr

25-mehbooba-mufti-webಜಮ್ಮು: ಎರಡು ತಿಂಗಳುಗಳ ರಾಷ್ಟ್ರಪತಿ ಆಳ್ವಿಕೆಯ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಭಾರತೀಯ ಜನತಾ ಪಕ್ಷ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಶುಕ್ರವಾರ ಅಂತಿಮ ನಿರ್ಧಾರಕ್ಕೆ ಬಂದಿವೆ. ಒಪ್ಪಂದ ಪಿಡಿಪಿಯ ಪ್ರಕಾರ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಲಿದ್ದು, ಬಿಜೆಪಿಯ ನಿರ್ಮಲ್ ಸಿಂಗ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ.

‘ಬಿಜೆಪಿ ಶಾಸಕರು ಪಿಡಿಪಿ ಜೊತೆಗೆ ಸರ್ಕಾರ ರಚಿಸಲು ಸರ್ವಾನುಮತದಿಂದ ನಿರ್ಧರಿಸಿದ್ದಾರೆ. ಪಿಡಿಪಿಯ ಮುಖ್ಯಮಂತ್ರಿ ಅಭ್ಯರ್ಥಿಗೆ ನಾವು ಬೆಂಬಲ ನೀಡುತ್ತೇವೆ’ ಎಂದು ಬಿಜೆಪಿ ಜಮ್ಮು ಮತ್ತು ಕಾಶ್ಮೀರ ಘಟಕದ ಅಧ್ಯಕ್ಷ ಸತ್ ಶರ್ಮಾ ಹೇಳಿದ್ದಾರೆ. ಮೈತ್ರಿಕೂಟದ ಕಾರ್ಯಸೂಚಿಗೆ ಅನುಗುಣವಾಗಿ ಬಿಜೆಪಿ ಮತ್ತು ಪಿಡಿಪಿ ಸರ್ಕಾರ ರಚನೆ ಮಾಡಲಿವೆ. ಇದರಲ್ಲಿ ಬದಲಾವಣೆ ಇಲ್ಲ. ನಿರ್ಮಲ್ ಸಿಂಗ್ ಅವರನ್ನು ಸರ್ವಾನುಮತದಿಂದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆ ಮಾಡಲಾಗಿದೆ ಎಂದು ಅವರು ನುಡಿದರು.

ಗುರುವಾರ ನಡೆದ ಪಿಡಿಪಿ ಶಾಸಕಾಂಗ ಸಭೆಯಲ್ಲಿ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರನ್ನು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆ ಮಾಡಲಾಗಿತ್ತು. ಜನವರಿ 7ರಂದು ಮುಫ್ತಿ ಮೊಹಮ್ಮದ್ ಸಯೀದ್ ನಿಧನದ ಬಳಿಕ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು.

Write A Comment