ನವದೆಹಲಿ: ಆಮ್ ಆದ್ಮಿ ಪಕ್ಷ ನಡೆದುಕೊಳ್ಳುತ್ತಿರುವ ರೀತಿ ಪ್ರಜಾಪ್ರಭುತ್ವ ವಿರೋಧಿ ಎಂಬುದನ್ನು ತೋರಿಸುತ್ತದೆ ಎಂದು ಹೇಳಿರುವ ಅರುಣ್ ಜೇಟ್ಲಿ, ಬಿಜೆಪಿಗೆ ದೆಹಲಿಯಲ್ಲಿ ತನ್ನ ರಾಜಕೀಯ ವರ್ಚಸ್ಸನ್ನು ವಾಪಸ್ ಪಡೆಯುವ ಅವಕಾಶವಿದೆ ಎಂದು ಹೇಳಿದ್ದಾರೆ.
“ಅರವಿಂದ್ ಕೇಜ್ರಿವಾಲ್ ಅವರ ಕ್ರಮಗಳು ಆಮ್ ಆದ್ಮಿ ಪಕ್ಷ ಪ್ರಜಾಪ್ರಭುತ್ವ ವಿರೋಧಿ ಎಂಬ ಸಂದೇಶ ರವಾನಿಸುತ್ತಿದೆ. ದೆಹಲಿಯ ಚುನಾವಣೆಯಲ್ಲಿ ನಾವು ಸೋತಿರಬಹುದು, ಆದರೆ ಬಿಜೆಪಿ ಕಳೆದುಕೊಂಡಿರುವ ವರ್ಚಸ್ಸನ್ನು ವಾಪಸ್ ಪಡೆಯುತ್ತಿದೆ ಎಂದು ಜೆಟ್ಲಿ ಅಭಿಪ್ರಾಯಪಟ್ಟಿದ್ದಾರೆ.
ಆಮ್ ಆದ್ಮಿ ಸರ್ಕಾರ ದೆಹಲಿಯ ಜನತೆಯನ್ನು ನಿರಾಶೆಗೊಳಿಸಿದೆ. ಕೇಜ್ರಿವಾಲ್ ಸರ್ಕಾರಕ್ಕೆ ಜನತೆ ಅಭಿವೃದ್ಧಿ ಬಗೆಗಿನ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ ಎಂದಿರುವ ಜೇಟ್ಲಿ, ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳೊಂದಿಗೆ ಕೇಜ್ರಿವಾಲ್ ಅವರ ಅಭಿವೃದ್ಧಿ ಕಾರ್ಯಗಳನ್ನು ಹೋಲಿಸಿ ಆಪ್ ನ ನಿಷ್ಕ್ರಿಯತೆಯನ್ನು ಜನರಿಗೆ ತಿಳಿಸಬೇಕೆಂದು ಜೇಟ್ಲಿ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.