ಅಂತರಾಷ್ಟ್ರೀಯ

ಆಸ್ಟ್ರೇಲಿಯಾ ವಿರುದ್ಧದ ಪಂದ್ಯ: ಪೂಜೆ, ಪ್ರಾರ್ಥನೆಗಳಲ್ಲ, ಕಠಿಣ ಶ್ರಮದಿಂದ ಗೆಲುವು ಸಾಧ್ಯ ಎಂದ ಕೊಹ್ಲಿ

Pinterest LinkedIn Tumblr

virat-kohli

ಮಾ.27 ರಂದು ಭಾರತ- ಆಸ್ಟ್ರೇಲಿಯಾ ನಡುವೆ ಮೊಹಾಲಿಯಲ್ಲಿ ಮತ್ತೊಂದು ಹೈ-ವೋಲ್ಟೇಜ್ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿರುವ ಟೀಂ ಇಂಡಿಯಾದ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ, ಪೂಜೆ, ಪ್ರಾರ್ಥನೆಗಳಿಗಿಂತ ಕಠಿಣ ಶ್ರಮದ ಮೂಲಕ ಗೆಲುವು ಸಾಧ್ಯ ಎಂದು ತಿಳಿಸಿದ್ದಾರೆ.

ನಾನೇನು ಪೂಜೆ, ಪ್ರಾರ್ಥನೆಗಳನ್ನು ಮಾಡುವವನಂತೆ ಕಾಣುತ್ತೇನಾ? ಎಂದು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಕೊಹ್ಲಿ, ಕಠಿಣ ಶ್ರಮ ಹಾಗೂ ಆತ್ಮವಿಶ್ವಾಸ ಯಶಸ್ಸು ತಂದುಕೊಡುತ್ತದೆ ಎಂಬುದನ್ನು ನಂಬಿರುವುದಾಗಿ ತಿಳಿಸಿದ್ದಾರೆ.

ಭಾರತ ತಂಡಕ್ಕೆ ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಉಪಾಂತ್ಯಕ್ಕೆ ಅರ್ಹತೆ ಪಡೆಯಲು ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾದ ಅನಿವಾರ್ಯತೆ ಇದ್ದು ಈ ಪಂದ್ಯ ಭಾರತಕ್ಕೆ ಮಹತ್ವದ್ದಾಗಿದೆ. ಉಭಯ ತಂಡದ ಆಟಗಾರರು ಶನಿವಾರವೇ ಕಾರ್ಯತಂತ್ರ ರೂಪಿಸಿದ್ದಾರೆ.

Write A Comment