ರಾಷ್ಟ್ರೀಯ

ಎಸ್ಪಿ, ಬಿಎಸ್ಪಿಯೊಂದಿಗೆ ಮೈತ್ರಿಯಿಲ್ಲ: ಕಾಂಗ್ರೆಸ್

Pinterest LinkedIn Tumblr

rahul-gandhi4ದೆಹಲಿ: ಮಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಬಿಎಸ್ಪಿ ಅಥವ ಸಮಾಜವಾದಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲವೆಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

ಕಾಂಗ್ರೆಸ್ ಉಪಾಧ್ಯಕ್ಷ ಸಾಮಾಜಿಕ ಜಾಲತಾಣದಲ್ಲಿ ಉತ್ತರಪ್ರದೇಶದಲ್ಲಿ ಬಿಎಸ್ಪಿಯೊಂದಿಗೆ ಮೈತ್ರಿಯ ಬಗ್ಗೆ ಒಲವು ತೋರಿದ್ದರು ಎನ್ನಲಾಗಿದೆ. ಆದರೆ ಈ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷದ ಮಹಾ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ, ಉತ್ತರಪ್ರದೇಶದಲ್ಲಿ ಎಸ್ಪಿ ಅಥವಾ ಬಿಎಸ್ಪಿಯೊಂದಿಗಿನ ಮೈತ್ರಿಯ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಂತೆ, ಉತ್ತರಪ್ರದೇಶದಲ್ಲಿ ಕಾಂಗ್ರೆಸ್ ಕರಾರುಗಳನ್ನು ಬಿಎಸ್ಪಿ ಒಪ್ಪಿಕೊಂಡರೆ ಅದರೊಂದಿಗೆ ಮೈತ್ರಿ ಮಾಡಿಕೊಳ್ಳಲು ರಾಹುಲ್ ಗಾಂಧಿ ಉತ್ಸುಕರಾಗಿದ್ದಾರೆ ಎಂದು ಸುದ್ದಿವಾಹಿನಿಯೊಂದು ವರದಿ ಪ್ರಸಾರಮಾಡಿತ್ತು. ಇದೇ ವೇಳೆ ಆಡಳಿತರೂಢ ಸಮಾಜವಾದಿ ಪಕ್ಷದೊಂದಿಗೂ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ ಎಂದು ಅದು ಉಲ್ಲೇಖಿಸಿತ್ತು.

Write A Comment