ಮುಂಬೈ: ಮೊಹಾಲಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಯುವರಾಜ್ ಸಿಂಗ್ ಗಾಯಗೊಂಡಿರುವುದರಿಂದ ವೆಸ್ಟ್ ಇಂಡೀಸ್ ವಿರುದ್ಧದ ಸೆಮಿಫೈನಲ್ನಲ್ಲಿ ಅಜಿಕ್ಯಾ ರೆಹಾನೆ ಅಥವಾ ರಾಜ್ಯದ ಮನೀಷ್ ಪಾಂಡೆಗೆ ಅಂತಿಮ 11ರಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.
ಭಾನುವಾರದ ಪಂದ್ಯಲ್ಲಿ ಯುವರಾಜ್ ಸಿಂಗ್ಗೆ ಹಿಮ್ಮಡಿಗಾಯವಾಗಿದ್ದು, ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂ ಮೂಲಗಳು ಮಾಹಿತಿ ನೀಡಿವೆ. ಒಂದು ವೇಳೆ ಗುರುವಾರವೂ ಯುವರಾಜ್ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದಿದ್ದರೆ ಅಜಿಂಕ್ಯಾ ರೆಹಾನೆ ಅಥವಾ ಮನೀಷ್ ಪಾಂಡೆ ಸ್ಥಾನ ಪಡೆಯಲಿದ್ದಾರೆ.
ಆಸ್ಟ್ರೇಲಿಯಾ ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಧೋನಿ ಅಗತ್ಯಬಿದ್ದರೆ ತಂಡದಲ್ಲಿ ಬದಲಾವಣೆ ಮಾಡಲಾಗುವುದು ಎಂದು ತಿಳಿಸಿದ್ದರು. ಮನೀಶ್ ಪಾಂಡೆ ಸಿಡ್ನಿಯಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಶತಕ ದಾಖಲಿಸಿ ಗಮನ ಸೆಳೆದಿದ್ದರು. ಅಷ್ಟೇ ಅಲ್ಲದೇ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಶತಕಗಳಿಸಿದ ಮೊದಲ ಭಾರತೀಯ ಆಟಗಾರರಾಗಿದ್ದಾರೆ.