ರಾಷ್ಟ್ರೀಯ

ಕೊಲ್ಕತ್ತಾ: ನಿರ್ಮಾಣ ಹಂತದಲ್ಲಿದ್ದ ಫ್ಲೈ ಓವರ್ ಕುಸಿತ; 14 ಕ್ಕೇರಿದ ಸಾವಿನ ಸಂಖ್ಯೆ

Pinterest LinkedIn Tumblr

dddd

ಕೊಲ್ಕತ್ತಾ: ಉತ್ತರ ಕೊಲ್ಕತ್ತಾದ ಬಾಬಾ ಬಜಾರ್‌ನಲ್ಲಿರುವ ಹಳೆಯ ಗಣೇಶ್ ಟಾಕೀಸ್ (ಗಿರೀಶ್ ಪಾರ್ಕ್) ಪಕ್ಕದಲ್ಲಿ ನಿರ್ಮಾಣ ಹಂತದಲ್ಲಿರುವ ವಿವೇಕಾನಂದ ಫ್ಲೈಓವರ್ ಕುಸಿದು ಬಿದ್ದು 14 ಮಂದಿ ಸಾವಿಗೀಡಾಗಿರುವ ಘಟನೆ ವರದಿಯಾಗಿದೆ.

ಗುರುವಾರ ಮಧ್ಯಾಹ್ನ ಈ ದುರಂತ ಸಂಭವಿಸಿದ್ದು 78 ಮಂದಿಗೆ ಗಾಯಗಳಾಗಿವೆ. ಅದೇ ವೇಳೆ ಸುಮಾರು 150 ಮಂದಿ ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಗಳು ಬಿರುಸಿನಿಂದ ಸಾಗುತ್ತಿದ್ದು, ಅಗ್ನಿಶಾಮಕ ದಳ, ಪೊಲೀಸ್ ಪಡೆ, ವಿಪತ್ತು ನಿರ್ವಹಣಾ ತಂಡ ಕಾರ್ಯ ನಿರತವಾಗಿದೆ.

Write A Comment