ರಾಷ್ಟ್ರೀಯ

ಕೋಲ್ಕತ್ತಾ ಮೇಲ್ಸೆತುವೆ ಕುಸಿತ: ಪ್ರಧಾನಿ ಟ್ವೀಟ್

Pinterest LinkedIn Tumblr

Modi1-e1456748110863ದೆಹಲಿ: ಕೋಲ್ಕತಾದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿರುವ ಮೇಲ್ಸೆತುವೆ ದುರಂತದ ಕುರಿತಂತೆ ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತಂತೆ ಟ್ವಿಟ್ ಮಾಡಿದ ಅವರು, ಕೋಲ್ಕತಾದ ಮೇಲ್ಸೆತುವೆ ಕುಸಿತದ ಘಟನೆ ನನಗೆ ಆಶ್ಚರ್ಯ ಹಾಗೂ ಬೇಸರವುಂಟುಮಾಡಿದೆ. ಸದ್ಯ ಅಲ್ಲಿನ ಪರಿಸ್ಥಿತಿ ಹಾಗೂ ರಕ್ಷಣಾ ಕಾರ್ಯಾಚರಣೆ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ ಎಂದಿದ್ದಾರೆ.

ಬಳಿಕ ಮೃತಪಟ್ಟವರಿಗೆ ಸಂತಾಪವನ್ನು ಸೂಚಿಸಿದ ಮೋದಿ, ಗಾಯಾಳುಗಳು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ದುರಂತ ಕುರಿತಂತೆ ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಫೋನಿನ ಮೂಲಕ ಸಂಭಾಷಣೆ ನಡೆಸಲಾಗಿದೆ. ವಿಪತ್ತು ನಿರ್ವಹಣಾ ಪಡೆ (ಎನ್ ಡಿಆರ್ ಎಫ್) ತಂಡಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಸೂಚನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಟ್ವೀಟ್ ಮಾಡಿದ್ದಾರೆ.

ಕೋಲ್ಕಾತ್ತಾದಲ್ಲಿ ನಿರ್ಮಾಣ ಹಂತದಲ್ಲಿರುವ ಮೇಲ್ಸೇತುವೆ ಗುರುವಾರ ಮಧ್ಯಾಹ್ನ ಕುಸಿದು ಬಿದ್ದಿದೆ. ಘಟನೆಯಲ್ಲಿ 14ಕ್ಕೂ ಹೆಚ್ಚು ಮಂದಿ ಸಾವನಪ್ಪಿ, 150ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಕಾರ್ಯಾಚರಣೆ ಮುಂದುವರೆದಿದೆ.

Write A Comment