ಹೈದರಾಬಾದ್, ಏ.1- ತೆಲಂಗಾಣದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಿಡಿಲು ಬಡಿದು ಐವರು ಮೃತಪಟ್ಟಿರುವ ಘಟನೆ ನಡೆದಿದೆ. ತೆಲಂಗಾಣದ ಮಹಬೂಬ್ನಗರ ಜಿಲ್ಲೆಯಲ್ಲಿ ಮೂವರು ಹಾಗೂ ನೆಲ್ಲೂರು ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದೆ.
ಭಾರೀ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಅನೇಕ ಮರಗಳು ಧರೆಗುರುಳಿವೆ. ವಿದ್ಯುತ್ ಕಂಬಗಳು ನೆಲಕಚ್ಚಿವೆ. ಜನ ಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.