ರಾಷ್ಟ್ರೀಯ

ನಾನಿಲ್ಲಿ ಬಂದಿದು ಸಾಂತ್ವನ ಹೇಳಲು, ರಾಜಕೀಯ ಮಾಡಲಲ್ಲ’ : ರಾಹುಲ್‌ಗಾಂಧಿ

Pinterest LinkedIn Tumblr

rahulಕೋಲ್ಕತ್ತಾ, ಏ.2-ಮೇಲ್ಸೇತುವೆ ಕುಸಿತದಲ್ಲಿ ಗಾಯಗೊಂಡಿರುವವರಿಗೆ ಸಾಂತ್ವನ ಹೇಳಲು ಬಂದಿದ್ದೇನೆಯೇ ಹೊರತು, ರಾಜಕೀಯದ ಬಗ್ಗೆ ಮಾತನಾಡಲು ಅಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ತಿಳಿಸಿದ್ದಾರೆ.

ಕಳೆದ ಗುರುವಾರ ನಿರ್ಮಾಣ ಹಂತದ ಮೇಲ್ಸೇತುವೆ ಕುಸಿದು ಈವರೆಗೆ ಸುಮಾರು 25 ಮಂದಿ ಜೀವ ಕಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ ನೆರವು ಮತ್ತು ಸಾಂತ್ವನ ತಿಳಿಸಲು ಬಂದಿದ್ದೇನೆಯೇ ಹೊರತು ಯಾವುದೇ ರಾಜಕೀಯ ಹೇಳಿಕೆ ನೀಡಲು ಅಲ್ಲ ಎಂದು ಸುದ್ದಿಗಾರರಿಗೆ ಅವರು ತಿಳಿಸಿದ್ದಾರೆ.

ಘಟನೆ ಕುರಿತಂತೆ ತನಿಖೆ ನಡೆಸಲಾಗುತ್ತಿದೆ. ಸ್ಫೋಟದಿಂದ ಮೇಲ್ಸೇತುವೆ ಕುಸಿದಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅದೇನೇ ಇದ್ದರೂ ಸೂಕ್ತ ಸಂದರ್ಭದಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೋಲ್ಕತ್ತಾ ಮೆಟ್ರೋ ಪಾಲಿಟನ್ ಡೆವಲಪ್‌ಮೆಂಟ್ ಅಥಾರಿಟಿಯ ಇಬ್ಬರು ಹಿರಿಯ ಎಂಜಿನಿಯರ್‌ಗಳನ್ನು ಕೂಡ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Write A Comment