ರಾಷ್ಟ್ರೀಯ

ತಮಿಳುನಾಡು ಚುನಾವಣೆ, ಕಾಂಗ್ರೆಸ್ 41 ಕ್ಷೇತ್ರಗಳಲ್ಲಿ ಕಣಕ್ಕೆ

Pinterest LinkedIn Tumblr

tn-webಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಜತೆ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್, ಒಟ್ಟು 234 ಕ್ಷೇತ್ರಗಳ ಪೈಕಿ 41ರಲ್ಲಿ ಸ್ಪರ್ಧಿಸಲು ಸಿದ್ಧತೆ ಮಾಡಿಕೊಂಡಿದೆ.

ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ ಅಧಿಕೃತ ಮಾಹಿತಿ ನೀಡಿದ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್, ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಎಂ. ಕರುನಾನಿಧಿ ಮುಂದಾಳತ್ವದ ಡಿಎಂಕೆ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹೇಳಿದರು.

ಮೇ. 16ರಂದು ಚುನಾವಣೆ ನಡೆಯಲಿದ್ದು, ಎಲ್ಲಾ ಪಕ್ಷಗಳೂ ಮತದಾರರ ಗಮನ ಸೆಳೆಯಲಿಕ್ಕಾಗಿ ನಾನಾ ತಂತ್ರಗಾರಿಕೆಯಲ್ಲಿ ತೊಡಗಿಕೊಂಡಿವೆ.

ತಮಿಳುನಾಡಿನ ಜನತೆ ಬದಲಾವಣೆ ಕೇಳುತ್ತಿದ್ದು, ಕಾಂಗ್ರೆಸ್ ಜತೆಗಿನ ಮೈತ್ರಿಯಿಂದ ಡಿಎಂಕೆ ಇನ್ನಷ್ಟು ಬಲಿಷ್ಠವಾಗಿದೆ. ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುವ ಮೂಲಕ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಡಿಎಂಕೆ ನಾಯಕ ಎಂ.ಕೆ. ಸ್ಲ್ಯಾಲಿನ್ ಹೇಳಿದ್ದಾರೆ.

ಎರಡನೇ ಸುತ್ತಿನ ಮಾತುಕತೆಯ ಬಳಿಕ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಮೈತ್ರಿ ಮಾಡಿಕೊಳ್ಳಲು ಮನಸ್ಸು ಮಾಡಿವೆ. ಕಾಂಗ್ರೆಸ್ 63 ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಪಟ್ಟು ಹಿಡಿದಿತ್ತು. ಆದರೆ ಇದಕ್ಕೆ ಡಿಎಂಕೆ ಒಪ್ಪಿರಲಿಲ್ಲ. ಕೇವಲ 41 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಹೇಳಿತ್ತು. ಕಡೆಗೂ ಕಾಂಗ್ರೆಸ್ ಇದಕ್ಕೆ ತಲೆದೂಗಿದೆ.

Write A Comment