ರಾಷ್ಟ್ರೀಯ

ಎಲ್.ಕೆ. ಅಡ್ವಾಣಿ ಪತ್ನಿ ಕಮಲಾ ನಿಧನ, ಪ್ರಧಾನಿ ಸಂತಾಪ

Pinterest LinkedIn Tumblr

KAMALA

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಅವರ ಪತ್ನಿ ಕಮಲಾ ಅಡ್ವಾಣಿ(85) ಅವರು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಮಲಾ ಅಡ್ವಾಣಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಕಮಲಾ ಅಡ್ವಾಣಿಯವರನ್ನು ಕಳೆದ ಡಿಸೆಂಬರ್‌ನಲ್ಲಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಮಲಾ ಅಡ್ವಾಣಿಯವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Write A Comment