ರಾಷ್ಟ್ರೀಯ

ಕಾಶ್ಮೀರದಲ್ಲಿ ಎನ್‌ಕೌಂಟರ್‌; ಇಬ್ಬರು ಉಗ್ರರು ಬಲಿ

Pinterest LinkedIn Tumblr

Encounterಶ್ರೀನಗರ (ಪಿಟಿಐ): ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ ಕಾರ್ಯಾಚರಣೆಯಲ್ಲಿ ಮಾಜಿ ಪೊಲೀಸ್ ಸೇರಿದಂತೆ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಗುರುವಾರ ಈ ಘಟನೆ ನಡೆದಿದೆ.
ಈ ಇಬ್ಬರೂ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರಾಗಿದ್ದು, ಹಲವು ಪ್ರಕರಣಗಳಲ್ಲಿ ಬೇಕಾಗಿದ್ದರು.
62ನೇ ರಾಷ್ಟ್ರೀಯ ರೈಫಲ್ಸ್‌ನ ಪಡೆಗಳು ಶೋಪಿಯಾನ್‌ ಜಿಲ್ಲೆಯ ವೆಹಿಲ್ ಗ್ರಾಮದಲ್ಲಿ ಗಸ್ತು ನಡೆಸುತ್ತಿದ್ದರು. ಈ ವೇಳೆ, ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಸೇನಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಕೊಲ್ಲಲಾಗಿದೆ. ಅವರ ಎರಡು ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಮೃತರನ್ನು ನಾಸೀರ್‌ ಅಹಮದ್ ಪಂಡಿತ್ ಹಾಗೂ ಇನಾಮುಲ್ ಹಕ್ ಅಲಿಯಾಸ್‌ ವಾಸೀಮ್ ಮಲ್ಲಾ ಎಂದು ಗುರುತಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
ಪಂಡಿತ್‌ ಪೊಲೀಸ್‌ ಪಡೆಯನ್ನು ತೊರೆದು ಕಳೆದ ವರ್ಷವಷ್ಟೇ ಉಗ್ರರನ್ನು ಸೇರಿದ್ದ.

Write A Comment