ರಾಷ್ಟ್ರೀಯ

ಕೇರಳ ದೇಗುಲ ದುರಂತ ಪ್ರಕರಣ: ಐದು ಮಂದಿಯನ್ನು ವಶಕ್ಕೆ ಪಡೆದ ತನಿಖಾಧಿಕಾರಿಗಳು

Pinterest LinkedIn Tumblr

Kollam

ಕೊಲ್ಲಂ: ಕೇರಳದ ಮೂಕಾಂಬಿಕ ದೇಗುಲ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಸೋಮವಾರ 5 ಮಂದಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಕೊಲ್ಲಂ ಜಿಲ್ಲೆಯಲ್ಲಿನ ಪಾರವೂರ್ ನಲ್ಲಿರುವ ಪುತ್ತಿಂಗಲ್ ದೇಗುಲದಲ್ಲಿ ವಾರ್ಷಿಕೋತ್ಸವ ಸಮಾರಂಭವನ್ನು ನಡೆಸಲಾಗುತ್ತಿತ್ತು. ಪ್ರತೀ ಬಾರಿಯಂತೆ ಈ ಬಾರಿಯೂ ದೇಗುಲದಲ್ಲಿ ಬಾಣಬಿರುಸುಗಳ ಪ್ರದರ್ಶನದ ನಡೆಸಲಾಗಿತ್ತು. ಆದರೆ, ಆಕಾಶದಲ್ಲಿ ಹಾರುವ ಬದಲು ಪಟಾಕಿಗಳು ನೆಲದಲ್ಲೇ ಸಿಡಿದ ಪರಿಣಾಮ ದುರ್ಘಟನೆಯೊಂದು ಸಂಭವಿಸಿ, ಸುಮಾರು 106ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು.

ಅಲ್ಲದೆ, 380ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಗಾಯಗೊಂಡವರ ಪೈಕಿ ಈಗಲೂ 45 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ ಆಡಳಿತ ಮಂಡಳಿಯ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.

ದುರ್ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದ ಕೇರಳ ಸರ್ಕಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು.

ಘಟನೆ ನಡೆಯುತ್ತಿದ್ದಂತೆ ದೇಗುಲದ ಆಡಳಿತ ಮಂಡಳಿದ 15 ಸದಸ್ಯರು ಪರಾರಿಯಾಗಿದ್ದರು. ಇದರಂತೆ ತನಿಖೆ ಚುರುಕುಗೊಳಿಸಿದ್ದ ತನಿಖಾಧಿಕಾರಿಗಳು ಇದೀಗ 5 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.

Write A Comment