ರಾಷ್ಟ್ರೀಯ

ಕಾಶ್ಮೀರ ಹಿಂಸಾಚಾರ: ಮೃತರ ಸಂಖ್ಯೆ 3ಕ್ಕೆ ಏರಿಕೆ

Pinterest LinkedIn Tumblr

Handwarawebಶ್ರೀನಗರ: ಜಮ್ಮು–ಕಾಶ್ಮೀರದ ಕುಪ್ವಾರ ಜಿಲ್ಲೆಯ ಹಂದ್ವಾರ ಪ್ರದೇಶದಲ್ಲಿ ಹಿಂಸಾಚಾರ ನಿಯಂತ್ರಿಸಲು ಮಂಗಳವಾರ ಭದ್ರತಾ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಉತ್ತರ ಕಾಶ್ಮೀರದ ಹಂದ್ವಾರ ನಗರದಲ್ಲಿ ಕಲ್ಲು ತೂರಾಟದಲ್ಲಿ ತೊಡಗಿದ್ದ ಗುಂಪನ್ನು ಚದುರಿಸಲು ಭದ್ರತಾ ಪಡೆ ಗುಂಡಿನ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡ ರಾಜಾ ಬೇಗಂ (55) ಎಂಬ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬುಧವಾರ ಬೆಳಿಗ್ಗೆ ಅವರು ಕೂಡ ಮೃತಪಟ್ಟರು ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಶಾಲೆಯಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯನ್ನು ಭದ್ರತಾ ಪಡೆ ಸಿಬ್ಬಂದಿ ಪೀಡಿಸಿದ್ದೇ ಈ ಹಿಂಸಾಚಾರಕ್ಕೆ ಕಾರಣ ಎನ್ನಲಾಗಿದೆ. ಈ ಪ್ರಕರಣದ ಕುರಿತು ತನಿಖೆಗೆ ಸೇನೆ ಆದೇಶಿಸಿದೆ. ಗಾಯಗೊಂಡ ಇನ್ನೂ ನಾಲ್ವರು ಎಸ್‌ಕೆಐಎಂಎಸ್‌ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Write A Comment