ರಾಷ್ಟ್ರೀಯ

ಕಾಶ್ಮೀರದಲ್ಲಿ ಮೊಬೈಲ್‌ ಅಂತರ್ಜಾಲ ಸೇವೆ ಸ್ಥಗಿತ

Pinterest LinkedIn Tumblr

stagitttaಶ್ರೀನಗರ (ಐಎಎನ್‌ಎಸ್‌): ಕಾಶ್ಮೀರದ ಹಲವು ಜಿಲ್ಲೆಗಳಲ್ಲಿ ಗುರುವಾರ ಬೆಳಿಗ್ಗೆಯಿಂದ ಮೊಬೈಲ್ ಅಂತರ್ಜಾಲ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಮಾಜದ ಸ್ವಾಸ್ಥ್ಯ ಕದಡುವ ಉದ್ದೇಶದಿಂದ ಕಿಡಿಗೇಡಿಗಳು ಹಬ್ಬಿಸುತ್ತಿರುವ ವದಂತಿಗಳನ್ನು ತಡೆಯಲು ಮೊಬೈಲ್‌ ಅಂತರ್ಜಾಲ ಸೇವೆಯನ್ನು ಗುರುವಾರದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೇವೆ ಸ್ಥಗಿತಗೊಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಮೊಬೈಲ್‌ ಸೇವಾ ಕಂಪೆನಿಗಳ ಅಧಿಕಾರಿಗಳು ನಿರಾಕರಿಸಿದ್ದಾರೆ. ವದಂತಿ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀನಗರ, ದಕ್ಷಿಣ ಕಾಶ್ಮೀರ ಸೇರಿದಂತೆ ಕುಪ್ವಾರ, ಬಾರಾಮುಲ್ಲಾ, ಬಂಡೀಪುರ ಜಿಲ್ಲೆಗಳಲ್ಲಿ ಮೊಬೈಲ್‌ ಅಂತರ್ಜಾಲ ಸೇವೆ ಸ್ಥಗಿತಗೊಂಡಿದೆ.

Write A Comment